ಅನಂತಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನತ್ತ ಪ್ರಧಾನಿ ಮೋದಿ

ಬೆಂಗಳೂರು:

      ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಶರೀರದ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿ 8.30ರ ನಂತರ  ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. 

      ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ 8 ರಿಂದಲೇ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಿದ್ದು, ಇದಕ್ಕಾಗಿ ಸಕಲ ಭದ್ರತಾ ಕ್ರಮಗಳನ್ನು ಕಾೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
      ನಾಳೆ ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ಟಿ.ಆರ್‌. ಮಿಲ್‌ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

 

 

(Visited 8 times, 1 visits today)

Related posts