ಅರ್ಥಪೂರ್ಣ ಕನಕದಾಸರ ಜಯಂತಿಗೆ ನಿರ್ಧಾರ

 ತುಮಕೂರು :

      ಕಳೆದ ವರ್ಷದಂತೆ  ಈ ಬಾರಿಯೂ ನವೆಂಬರ್ 26ರಂದು ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಅರ್ಥಪೂರ್ಣ ಹಾಗೂ ಸಂತಸದಿಂದ ಆಚರಿಸಲು ತುಮಕೂರು ಜಿಲ್ಲೆಯಲ್ಲಿರುವ ಕುರುಬ ಸಮುದಾಯದ ಸಂಘ ಸಂಸ್ಥೆಗಳು-ಮುಖಂಡರ ಸಹಕಾರ ಅತಿ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

      ಅಂದು ಕನಕದಾಸರ ಭಾವಚಿತ್ರದ ಮೆರವಣಿಗೆಯನ್ನು ಕಲಾ ತಂಡಗಳೊಂದಿಗೆ ಶಿರಾಗೇಟ್‍ನ ಬಳಿಯ ಕನಕ ವೃತ್ತದಲ್ಲಿರುವ ಕನಕದಾಸರ ಪ್ರತಿಮೆಗೆ ಪೂಜೆ ಸಲ್ಲಿಸಿದ ನಂತರ ಚಾಲನೆ ನೀಡಲಾಗುತ್ತದೆ. ಮೆರವಣಿಗೆಯು ತುಮಕೂರು ನಗರದ ವಿವಿಧ ರಸ್ತೆಗಳಲ್ಲಿ ತೆರಳಿ ಸಮಾರಂಭ ನಡೆಯುವ ಸ್ಥಳದಲ್ಲಿ ಕೊನೆಗೊಳ್ಳಲಿದೆ ಎಂದು ಅವರು ಹೇಳಿದರು.

      ಕನಕದಾಸರ ಬದುಕು ಮತ್ತು ಸಂದೇಶದ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಹಾಗೂ ಜನರಿಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮಾರಂಭದಲ್ಲಿ ಕನಕದಾಸರ ಕುರಿತು ಉಪನ್ಯಾಸವನ್ನು ಏರ್ಪಡಿಸಬೇಕು. ಉತ್ತಮ ಉಪನ್ಯಾಸಕರ ಹೆಸರನ್ನು ಅಂತಿಮಗೊಳಿಸುವಂತೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರಿಗೆ ಸೂಚಿಸಿದರು. 

      ಜಯಂತಿಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಮುದಾಯದ 5 ಮಂದಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

      ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಮಹಾನಗರಪಾಲಿಕೆ ಆಯುಕ್ತ ಮಂಜುನಾಥಸ್ವಾಮಿ, ಸಮಾಜದ ಮುಖಂಡರಾದ ಬಿ.ಕೆ. ಮಂಜುನಾಥ್, ಶಿವಮೂರ್ತಿ, ಕೆಂಪರಾಜು, ಎಸ್. ನಾಗಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

(Visited 17 times, 1 visits today)

Related posts

Leave a Comment