ಆನ್‌ಲೈನ್ ಮದ್ಯ ಮಾರಾಟ ನಿಷೇಧ..!?

ಬೆಂಗಳೂರು:

      ರಾಜ್ಯದಲ್ಲಿ ಆನ್‌ಲೈನ್ ಮದ್ಯ ಮಾರಾಟವನ್ನು ಶೀಘ್ರವೇ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

      ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರ ಸ್ವೀಕರಿಸುವ ಮುಂಚೆ, ಹಿಂದಿನ ಸರ್ಕಾರ ಆನ್‌ಲೈನ್‌ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಈ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ. ಹಿಂದೆ ಅನುಮತಿ ಕೊಟ್ಟಿರುವ ಫೈಲ್‌ ಹಿಡಿದು ಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಫೈಲ್ ಪರಿಶೀಲಿಸಿ ಆನ್‍ಲೈನ್ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

      ಆನ್‌ಲೈನ್ ಮದ್ಯ ಮಾರಾಟವನ್ನು ಅಧಿಕಾರಿಗಳು ಜಾರಿಗೊಳಿಸಿದ್ದಾರೆ . ಇದು ನನ್ನ ಗಮನಕ್ಕೆ ಬರುತ್ತಿದ್ದಂತೆಯೇ ಅದನ್ನು ನಿಲ್ಲಿಸಲು ಸೂಚನೆ ನೀಡಿದ್ದೇನೆ, ಯಾವ ಗುತ್ತಿಗೆದಾರರಿಗೆ ಲಾಭ ಮಾಡಿಕೊಡುಬ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

(Visited 7 times, 1 visits today)

Related posts

Leave a Comment