ಇ-ಕೆವೈಸಿ ಕಾರ್ಯವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಡೀಸಿ ಸೂಚನೆ

ತುಮಕೂರು:

      ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಪಡಿತರ ಚೀಟಿದಾರರ ಕುಟುಂಬ ಸದಸ್ಯರ ಇ-ಕೆವೈಸಿ ಮಾಡುವ ಕಾರ್ಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜುಲೈ 15ರವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾಕೆ.ರಾಕೇಶ್ ಕುಮಾರ್ ನಿರ್ದೇಶನ ನೀಡಿದ್ದಾರೆ.

      ಪಡಿತರ ಚೀಟಿದಾರರು ತಮ್ಮ ಕುಟುಂಬ ಸದಸ್ಯರ ಇ-ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿಗೆ ಹೋಗುವ ಅವಶ್ಯಕತೆ ಇಲ್ಲ. ಇ-ಕೆವೈಸಿ ನೋಂದಣಿಯನ್ನು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಸಂಗ್ರಹಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರ ಸೂಚನೆಯಂತೆ ಈ ನಿರ್ದೇಶನವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

(Visited 14 times, 1 visits today)

Related posts

Leave a Comment