ಉಪ ಚುನಾವಣೆ : ಶೇ 65.57 ರಷ್ಟು ಮತದಾನ

ಬೆಂಗಳೂರು :

      5 ಕ್ಷೇತ್ರಗಳ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. 3 ಲೋಕಸಭಾ ಕ್ಷೇತ್ರ ಮತ್ತು 2 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 65.57ರಷ್ಟು ಮತದಾನ ನಡೆದಿದೆ.

      ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನವೆಂಬರ್ 3ರ ಶನಿವಾರ ನಡೆಯಿತು. ಶಾಂತಿಯುತವಾಗಿ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.

      ಜಮಖಂಡಿಯಲ್ಲಿ ಅತಿ ಹೆಚ್ಚು ಅಂದರೆ 81.58 ಮತ್ತು ಮಂಡ್ಯದಲ್ಲಿ ಅತಿ ಕಡಿಮೆ ಎಂದರೆ 53.93 ರಷ್ಟು ಮತದಾನವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಈಗ ಯಾರು ಗೆಲ್ಲುತ್ತಾರೆ?, ಎಷ್ಟು ಮತಗಳ ಅಂತರದಲ್ಲಿ ಗೆಲ್ಲುತ್ತಾರೆ? ಎಂದು ಲೆಕ್ಕಾಚಾರ ಆರಂಭವಾಗಿದೆ.

ಮತದಾನದ ವಿವರ :

  • ಜಮಖಂಡಿ ವಿಧಾನಸಭಾ ಕ್ಷೇತ್ರ – 81.58
  •  ರಾಮನಗರ ವಿಧಾನಸಭಾ ಕ್ಷೇತ್ರ – 73.71
  • ಬಳ್ಳಾರಿ ಲೋಕಸಭಾ ಕ್ಷೇತ್ರ 63.85
  • ಶಿವಮೊಗ್ಗ ಲೋಕಸಭಾ ಕ್ಷೇತ್ರ 61.05
  • ಮಂಡ್ಯ ಲೋಕಸಭಾ ಕ್ಷೇತ್ರ 53.93
(Visited 9 times, 1 visits today)

Related posts

Leave a Comment