ತುಮಕೂರು : 

     ಜಿಲ್ಲೆಯ ಮಧುಗಿರಿ, ಶಿರಾ, ತಿಪಟೂರು, ತುರುವೇಕೆರೆ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕುಗಳ ಒಟ್ಟು 161 ಗ್ರಾಮ ಪಂಚಾಯಿತಿ ವ್ಯಾಪ್ತಿಯ 1189 ಕ್ಷೇತ್ರಗಳ 2543 ಸದಸ್ಯ ಸ್ಥಾನಗಳಿಗೆ 1321 ಮತಗಟ್ಟೆಗಳಲ್ಲಿ ಡಿಸೆಂಬರ್ 27ರಂದು ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ವೇಳಾಪಟ್ಟಿ ಪ್ರಕಟಿಸಿದ್ದಾರೆ.

      ವೇಳಾಪಟ್ಟಿಯನ್ವಯ ಎರಡನೇ ಹಂತದ ಚುನಾವಣೆ ನಡೆಸಲು ಚುನಾವಣಾಧಿಕಾರಿಗಳು ಶುಕ್ರವಾರ(ಡಿ.11)ಚುನಾವಣಾ ನೋಟೀಸ್ ಅನ್ನು ಹೊರಡಿಸಿದ್ದು, ಅಭ್ಯರ್ಥಿಗಳು ಡಿಸೆಂಬರ್ 16ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆಯು ಡಿಸೆಂಬರ್ 17ರಂದು ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಡಿಸೆಂಬರ್ 19 ಕಡೆಯ ದಿನವಾಗಿದೆ. ಮತದಾನದ ಅವಶ್ಯವಿದ್ದರೆ ಡಿಸೆಂಬರ್ 27ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಹಾಗೂ ಮರು ಮತದಾನವಿದ್ದಲ್ಲಿ ಡಿಸೆಂಬರ್ 29ರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮತ ಎಣಿಕೆಯು ಡಿಸೆಂಬರ್ 31ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಡಿ.30ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

      ಎರಡನೇ ಹಂತದ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಗ್ರಾಮಪಂಚಾಯಿತಿ ಕಛೇರಿಗಳಲ್ಲಿ ಚುನಾವಣಾಧಿಕಾರಿಗಳ ಕಛೇರಿಯನ್ನು ಸ್ಥಾಪಿಸಲಾಗಿದೆ. ಉಮೇದುವಾರರು ನಾಮಪತ್ರಗಳನ್ನು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯೊಳಗಿನ ಅವಧಿಯಲ್ಲಿ (ದಿನಾಂಕ 12-12-2020ರ ಎರಡನೇ ಶನಿವಾರ ಸಹ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುತ್ತದೆ) ಸಲ್ಲಿಸಬಹುದಾಗಿದೆ.

     ನಾಮಪತ್ರಗಳು ಹಾಗೂ ಇತರೆ ನಮೂನೆಗಳನ್ನು ಚುನಾವಣಾಧಿಕಾರಿಗಳ ಕಛೇರಿಗಳಲ್ಲಿ ವಿತರಿಸಲಾಗುವುದು. ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ-ಅ, ಹಿಂದುಳಿದ ವರ್ಗ-ಬಿ ಮೀಸಲು ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಜಾತಿ/ಆದಾಯ ಪ್ರಮಾಣಪತ್ರಗಳನ್ನು ನಿಯಮಾನುಸಾರ ನೀಡಲು ತಾಲ್ಲೂಕು ಕಛೇರಿಗಳಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ನಿಗಧಿತ ನಮೂನೆಗಳಲ್ಲಿ ಅರ್ಜಿ ಮತ್ತು ಇತರೆ ದಾಖಲೆಗಳನ್ನು ಸಲ್ಲಿಸಿ, ಜಾತಿ/ಆದಾಯ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸುವ ಅಭ್ಯರ್ಥಿಗಳು/ಸೂಚಕರು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಈ ಸಂಬಂಧ ಎಲ್ಲಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.

       ಸಾರ್ವಜನಿಕರಿಗೆ ಗ್ರಾಮಪಂಚಾಯಿತಿ ಚುನಾವಣೆಯ ಅಗತ್ಯ ಮಾಹಿತಿಗಳನ್ನು ಒದಗಿಸಲು ತಾಲ್ಲೂಕು ಕಛೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನೀತಿ ಸಂಹಿತೆಯ ಅನುಷ್ಟಾನಕ್ಕಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ನೋಡಲ್ ಅಧಿಕಾರಿಗಳಾಗಿದ್ದು, ತಾಲ್ಲೂಕು ಕಛೇರಿಗಳಲ್ಲಿ 24ಘಿ7 ಕಾರ್ಯನಿರ್ವಹಿಸಲು ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ.

      ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮತಗಟ್ಟೆ ಪ್ರವೇಶಿಸುವ ಮೊದಲು ತಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡು ಮತ ಚಲಾಯಿಸಬೇಕು. ಗ್ರಾಮಪಂಚಾಯಿತಿ ಚುನಾವಣೆಯು ಪಕ್ಷ ರಹಿತ ಚುನಾವಣೆಯಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಡಿಸೆಂಬರ್ 31ರ ಸಂಜೆ 05:00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಟಾನಕ್ಕಾಗಿ ತಾಲ್ಲೂಕಿಗೆ ಒಂದರಂತೆ ಎಂಸಿಸಿ ತಂಡವನ್ನು ರಚಿಸಲಾಗಿದೆ. ನೀತಿ ಸಂಹಿತೆಯು ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ.

      ಕೋವಿಡ್ ಸೋಂಕಿತರು ಹಾಗೂ ಕೋವಿಡ್ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ (ಐಚಿsಣ ಊouಡಿ) ಮತದಾನ ಮಾಡಲು ಅವಕಾಶ ಕಲ್ಪಿಸಿದೆ.

     ರಾಜ್ಯ ಚುನಾವಣಾ ಆಯೋಗದ ಆದೇಶ ಸಂಖ್ಯೆ: ರಾಚುಆ:248:ಇಜಿಪಿ:2015, ದಿನಾಂಕ 19.03.2015 ರಂತೆ ಗ್ರಾಮಪಂಚಾಯಿತಿ ಚುನಾವಣೆಗಳ ಮತಪತ್ರದಲ್ಲಿ “ಓಔಖಿಂ” ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

 

(Visited 9 times, 1 visits today)