ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಪದೆ ಪದೇ ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ನಷ್ಟದ ಸುಳಿಗೆ ಸಿಲುಕುತ್ತಿದ್ದು, ಸಾರಿಗೆ ಬಸ್ ಪ್ರಮಾಣ ದರ ಏರಿಕೆ ಅನಿವಾರ್ಯ ಎಂದು ತಿಳಿಸಿದರು.
      ಈ‌ ಮುಂಚೆ ಶೇ.18 ದರ ಏರಿಕೆಗೆ ಪ್ರಸ್ತಾಪ ಸಲ್ಲಿಸಲಾಗಿತ್ತು. ಈಗ ಮತ್ತೆ ಸಿಎಂ‌ ಮುಂದೆ ಪ್ರಸ್ತಾಪ ಸಲ್ಲಿಸಿ ನಿಮ್ಮ ವಿವೇಚನೆಗನುಸಾರವಾಗಿ ದರ ಏರಿಕೆ ಮಾಡುವಂತೆ ಮನವಿ ಮಾಡಲಿದ್ದೇವೆ. ನಿನ್ನೆ‌ ನಡೆದ ಮಂಡಳಿ ಸಭೆಯಲ್ಲೂ ಸಾರಿಗೆ ನಿಗಮಗಳ ಎಂಡಿಗಳು ದರ ಏರಿಕೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂಗೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಿದ್ದಾರೆ.

      ಡೀಸೆಲ್ ಬೆಲೆ ಹೆಚ್ಚಳವಾಗಿರುವುದರಿಂದ ಎಲ್ಲಾ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ. ಈಗಾಗಲೇ ಎಲ್ಲಾ ಸಾರಿಗೆ ನಿಗಮಗಳು ಸುಮಾರು 670ಕೋಟಿ ರೂ.‌ನಷ್ಟ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯವಾಗಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಖಾಸಗಿ ಬಸ್‌ಗಳಿಗೂ ಜಿಪಿಎಸ್: 

      ರಾಜ್ಯದಲ್ಲಿ ಸರಕಾರಿ ಬಸ್ಸುಗಳ ಜತೆ ಖಾಸಗಿ ಬಸ್ಸುಗಳಿಗೂ ಜಿಪಿಎಸ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸುವಂತೆ ಸೂಚನೆ ನೀಡಲಾಗಿದ್ದು, ನಿರ್ದಿಷ್ಟ ಮಾರ್ಗದಲ್ಲಿ ಪ್ರಯಾಣಿಸುವ ವೇಳೆ ಹಲವು ಕಡೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಹೊಸ ಬಸ್ ಖರೀದಿ:

       ಸಾರಿಗೆ ಸಂಸ್ಥೆಗೆ 7 ಸಾವಿರ ಹೊಸ ಬಸ್‌ಗಳನ್ನು ಖರೀದಿಸಲಾಗುವುದು. ಆ ಪೈಕಿ ಕೆಎಸ್ಸಾರ್ಟಿಸಿಗೆ 4 ಸಾವಿರ, ಬಿಎಂಟಿಸಿಗೆ ಮೂರು ಸಾವಿರ ಹೊಸ ಬಸ್‌ಗಳನ್ನು ಒದಗಿಸಲು ಉದ್ದೇಶಿಸಲಾಗಿದೆ ಎಂದು ಅವರು ಇದೆ ವೇಳೆ ತಿಳಿಸಿದರು.

 

(Visited 15 times, 1 visits today)