ಉಡುಪಿ:

      ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಂತ ಊರು ಕುಂದಾಪುರ ತಾಲೂಕಿನ ಯೆಡಾಡಿಯಲ್ಲಿ ರವಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

     ಶನಿವಾರ ಬೆಳಗ್ಗೆ 11ರಿಂದ 2 ಗಂಟೆ ತನಕ ಯಲಹಂಕದಲ್ಲಿರುವ ಸಶಸ್ತ್ರ ಪೊಲೀಸ್ ಪಡೆಯ ತರಬೇತಿ ಶಾಲೆಯ ಆವರಣದಲ್ಲಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯಲಾಗುವುದು. ಇಂದು ರಾತ್ರಿ 11 ಗಂಟೆಗೆ ಪಾರ್ಥಿವ ಶರೀರ ಮಧುಕರ ಶೆಟ್ಟಿಯವರ ಊರಿಗೆ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

ತನಿಖೆಗೆ ಆಗ್ರಹ:
       ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವು ಕುರಿತ ವರದಿಯನ್ನು ಆಧರಿಸಿ ಸಂಶಯವಿದ್ದರೆ ತನಿಖೆಗೆ ಆದೇಶ ಮಾಡುವುದಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

       ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಬಗ್ಗೆ ತನಿಖೆಯಾಗಬೇಕಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಧುಕರ್ ಶೆಟ್ಟಿ ನಿಧನಕ್ಕೆ ಸಂತಾಪ ಸೂಚಿಸಿರುವ ಅವರು ಮಧುಕರ್ ಶೆಟ್ಟಿ ಪೊಲೀಸ್ ಇಲಾಖೆಗೆ ದೊಡ್ಡ ಆಸ್ತಿಯಾಗಿದ್ದರು. ಅವರ ಅಸ್ವಾಭಾವಿಕ ಸಾವಿನ ಬಗ್ಗೆ ತನಿಖೆಯಾಗಬೇಕು. ದೇವರು ಮಧುಕರ್ ಶೆಟ್ಟಿ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

(Visited 15 times, 1 visits today)