ಒತ್ತಡದಿಂದ ಮುಕ್ತರಾಗಲು ಕ್ರೀಡೆ ಸಹಕಾರಿ : ಸಂಸದ ಎಸ್.ಪಿ. ಮುದ್ದಹನುಮೇಗೌಡ

 ತುಮಕೂರು :

      ಸರ್ಕಾರಿ ನೌಕರರು ಕೆಲಸದ ಒತ್ತಡ ಹಾಗೂ ಮಾನಸಿಕ ಒತ್ತಡಗಳಿಂದ ಮುಕ್ತರಾಗಲು ಕ್ರೀಡೆ ಸಹಕಾರಿ ಎಂದು ಸಂಸದ ಎಸ್.ಪಿ. ಮುದ್ದಹನುಮೇಗೌಡ ಅಭಿಪ್ರಾಯಪಟ್ಟರು.

      ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿಂದು ಏರ್ಪಡಿಸಲಾಗಿದ್ದ “ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ”ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಸರ್ಕಾರಿ ನೌಕರರು ಬೆಳಗಿನಿಂದ ಸಂಜೆಯವರೆಗೂ ಒತ್ತಡದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅಲ್ಲದೆ ಕುಳಿತಲ್ಲೇ ಕೆಲಸ ಮಾಡುವುದರಿಂದ ಸ್ಥೂಲಕಾಯ ಉಂಟಾಗಿ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇರುತ್ತದೆ. ಇದರಿಂದ ಮಾನಸಿಕ ಒತ್ತಡ, ಅನಾರೋಗ್ಯ ಸಮಸ್ಯೆಯನ್ನು ಅನುಭವಿಸುತ್ತಿರುತ್ತಾರೆ. ನಿಯಮಿತವಾಗಿ ಯೋಗ, ಧ್ಯಾನ, ದೈಹಿಕ ವ್ಯಾಯಾಮ, ಕ್ರೀಡಾಭ್ಯಾಸವನ್ನು ರೂಢಿಸಿಕೊಳ್ಳುವುದರಿಂದ ಇಂತಹ ಸಮಸ್ಯೆಗಳಿಂದ ದೂರವಾಗಬಹುದು. ಅಲ್ಲದೆ ಸೇವಿಸುವ ಆಹಾರದಲ್ಲಿಯೂ ಸಮತೋಲನವನ್ನು ಕಾಪಾಡಿಕೊಳ್ಳಬೇಕೆಂದು ಅವರು ಕಿವಿಮಾತು ಹೇಳಿದರು.

      ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಮಾತನಾಡಿ, ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಹಾಗೂ ಮನಸ್ಸಿಗೆ ಉಲ್ಲಾಸ ದೊರೆಯುತ್ತದೆ ಹಾಗೂ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

      ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್.ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
ನಂತರ ಸರ್ಕಾರಿ ನೌಕರರು ವಾಲಿಬಾಲ್, ಕ್ರಿಕೆಟ್, ಗುಂಡು ಎಸೆತ, ಓಟದ ಸ್ಪರ್ಧೆ, ಮತ್ತಿತರ ಕ್ರೀಡೆಗಳಲ್ಲಿ ಸ್ಪರ್ಧಿಸಿದರು.

(Visited 5 times, 1 visits today)

Related posts

Leave a Comment