ಕಲಬುರಗಿ : ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

ಕಲಬರುಗಿ :  

      ನಗರದ ಕುಖ್ಯಾತ ರೌಡಿಶೀಟರ್ 7 ಸ್ಟಾರ್ ಪ್ರದೀಪ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದಲ್ಲಿ ನಡೆದಿದೆ.

      ಪ್ರಕರಣವೊಂದರ ಸ್ಥಳ ಪರಿಶೀಲನೆಗೆ ಪೊಲೀಸರು ಕರೆದುಕೊಂಡು ಹೋದಾಗ ಆತ ಪೊಲೀಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದ್ದಾನೆ. ಆಗ ಆತ್ಮ ರಕ್ಷಣೆಗಾಗಿ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಫೈರಿಂಗ್ ನಡೆಸಿದ್ದಾಗಿ ಎಸ್.ಪಿ ಶಶಿಕುಮಾರ್​ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಅಶೋಕ ನಗರದ ಸಿಪಿಐ ಪ್ರದೀಪ್ ಕಾಲಿಗೆ ಗುಂಡಿಟ್ಟಿದ್ದಾರೆ.

      ಪ್ರದೀಪ್ 19 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ, ಈತನ ಮೇಲೆ ಅಪಹರಣ, ಕೊಲೆ ಯತ್ನ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಇತ್ಯಾದಿ ಪ್ರಕರಣಗಳು ದಾಖಲಾಗಿದ್ದವು. ಗಾಯಾಳು ರೌಡಿಶೀಟರ್​ನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು ಪೊಲೀಸ್ ಸಿಬ್ಬಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

     ಕಲಬುರಗಿ ಹೊರವಲಯದ ಗ್ರೀನ್ ಸಿಟಿ ಬಳಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ವೆಂಕಟೇಶ್ ಮತ್ತು ಬಸವರಾಜು ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

(Visited 9 times, 1 visits today)

Related posts