ತುಮಕೂರು


ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಲುವಾಗಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿತ ಅಭ್ಯರ್ಥಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಹಿನ್ನೆಲೆಯಲ್ಲಿ ನಗರದ ಬಿಎಚ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ತುಮಕೂರು ಗ್ರಾಮಾಂತರ ತಾಲೂಕಿನ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಪಕ್ಷದ ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು.
ಸಂದರ್ಭದಲ್ಲಿ ಮಾತನಾಡಿದ ತುಮಕೂರು ಗ್ರಾಮಾಂತರ ಕಾಂಗ್ರೆಸ್ ಉಸ್ತುವಾರಿ ಕೆಂಪಣ್ಣ ಈ ಬಾರಿ ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಬೂತ್ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ತಾಲೂಕ ಪಂಚಾಯಿತಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಧ್ಯಕ್ಷರುಗಳು ಶ್ರಮವಹಿಸಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷ ಸಂಘಟನೆಯನ್ನು ಕೈಗೊಳ್ಳಬೇಕು ರಾಜ್ಯದಲ್ಲಿರುವ ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆಯಲು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು ಅಲ್ಲದೇ ತುಮಕೂರು ಗ್ರಾಮಾಂತರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಮಣಿಸಲು ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಕಾಂಗ್ರೆಸ್ ಪಕ್ಷ ಮಣೆ ಹಾಕುವ ಅಭ್ಯರ್ಥಿಯನ್ನು ಗೆಲ್ಲಿಸಲು ತಯಾರಿ ನಡೆಸಬೇಕು ಎಂದು ಅವರು ಹೇಳಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಸೂರ್ಯ ಮುಕುಂದರಾಜ್ ನಾನು ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 20 ವರ್ಷಗಳಿಂದ ಸಕ್ರಿಯವಾಗಿ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ ಈ ಬಾರಿ ಗ್ರಾಮಾಂತರದಲ್ಲಿ ಆಕಾಂಕ್ಷಿಯಾಗಿ ಅಭ್ಯರ್ಥಿಯಾಗಿದ್ದೇನೆ ತಳಮಟ್ಟದಿಂದ ಪಕ್ಷವನ್ನ ಸಂಘಟನೆ ಮಾಡುತ್ತಾ ಬಂದಿದ್ದು ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಮಣಿಸುವ ಎಲ್ಲಾ ತಯಾರಿಗಳನ್ನು ನಡೆಸಿದ್ದೇನೆ ಎಂದರು.
ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯು ವಂಚನೆ ಆರೋಪದಡಿ ಜೈಲಿಗೆ ಹೋಗಲಿದ್ದು ಬಿಜೆಪಿ ಅಭ್ಯರ್ಥಿ ಮನೆಗೆ ಹೋಗಲಿದ್ದಾರೆ ಗ್ರಾಮಾಂತರದಲ್ಲಿ ಇವರಿಬ್ಬರ ಆರ್ಭಟದಿಂದ ಜನರು ನಲುಗಿದ್ದು ಇವರ ಬಗ್ಗೆ ಮಾತನಾಡಲು ನನಗೆ ಯಾವುದೇ ಭಯವಿಲ್ಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಯವರನ್ನ ಸಿಡಿ ಕೇಸ್ ನಲ್ಲಿ ಸಿಲುಕಿಸಿ ಸರ್ಕಾರ ಮತ್ತು ಪೆÇಲೀಸ್ ಇಲಾಖೆ ಎದುರು ಹಾಕಿಕೊಂಡು ಕೆಲಸ ಮಾಡಿದ್ದೇನೆ ಇಂಥ ಸಂದರ್ಭದಲ್ಲಿ ಅವರ ವಿರುದ್ಧ ಹೋರಾಟ ಮಾಡುವುದು ಸುಲಭದ ಮಾತಲ್ಲ ಹಾಗಾಗಿ ಗ್ರಾಮಾಂತರದಲ್ಲಿ ಸಂಕಷ್ಟದಲ್ಲಿರುವ ಜನರ ಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಪಕ್ಷದಲ್ಲಿ ಈ ಬಾರಿ ಆಕಾಂಕ್ಷಿಯಾಗಿ ಅಭ್ಯರ್ಥಿಯಾಗಿದ್ದೇನೆ ಗುರು ಗ್ರಾಮಾಂತರದಲ್ಲಿ ನಾನು ಸೇರಿದಂತೆ ಅನೇಕ ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನ ಒಪ್ಪಿಕೊಂಡು ಕೆಲಸ ಮಾಡುವ ಅಭ್ಯರ್ಥಿಗಳಿಗೆ ಪಕ್ಷ ಟಿಕೆಟ್ ನೀಡುತ್ತದೆ ಅರ್ಹತೆ ಮತ್ತು ಶಕ್ತಿ ತುಂಬಿರುವಂತಹ ಅಭ್ಯರ್ಥಿಗೆ ಪಕ್ಷ ಮನ್ನಣೆ ನೀಡಲಿದ್ದು ಪಕ್ಷ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನು ಗೆಲ್ಲಿಸ ಬೇಕು ಎಂದು ಅವರಿಗೆ ಹೇಳಿ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ತುಮಕೂರು ಗ್ರಾಮಾಂತರದ ಕಾಂಗ್ರೆಸ್ ಆಕಾಂಕ್ಷಿ ಅಭ್ಯರ್ಥಿ ಎಸ್ ಟಿ ಶ್ರೀನಿವಾಸ್ ಅವರು ಮಾತನಾಡುತ್ತಾ ತುಮಕೂರು ಗ್ರಾಮಾಂತರದಲ್ಲಿ ಇದೀಗ ಕಾಂಗ್ರೆಸ್ ಪಕ್ಷದ ಸಂಘಟನಾ ಕಾರ್ಯಕ್ರಮ ಶುರುವಾಗಿದ್ದು ಕಾರ್ಯಕರ್ತರು ಸೈನಿಕರಂತೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಅಭ್ಯರ್ಥಿಯಾ ಗುವುದಕ್ಕಿಂತ ಪಕ್ಷದಲ್ಲಿ ರಾಷ್ಟ್ರೀಯ ಜಿಲ್ಲೆಯ ರಾಜ್ಯ ಮುಖಂಡರು ಸಾಮಾನ್ಯ ಕಾರ್ಯಕರ್ತರಾಗಿ ಬೆಳೆದು ಬಂದವರು ಹೀಗಾಗಿ ಮೊದಲು ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಳ್ಳಬೇಕು ಇಂಥವರಿಗೆ ಪಕ್ಷ ಮನ್ನಣೆ ನೀಡಿ ಟಿಕೆಟ್ ನೀಡಿ ಗೆಲ್ಲಿಸಿಕೊಳ್ಳಬೇಕು ಎಂದರು.
ಗ್ರಾಮಾಂತರದಲ್ಲಿ ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಇರಲಿಲ್ಲ ಇದೀಗ ಪಕ್ಷದ ಆಕಾಂಕ್ಷಿ ಅಭ್ಯರ್ಥಿಗಳಾಗಿ ನಾಲ್ಕು ಜನರು ಅರ್ಜಿ ಸಲ್ಲಿಸಿದ್ದು ಪಕ್ಷ ಸೂಕ್ತ ವ್ಯಕ್ತಿಗಳಿಗೆ ಟಿಕೆಟ್ ನೀಡುವ ಭರವಸೆಯಿದ್ದು ಕಾರ್ಯಕರ್ತರು ಅವರನ್ನ ಗೆಲ್ಲಿಸುವಂತಹ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರುಗಳು ಸದಸ್ಯರುಗಳು ಸೇರಿದಂತೆ ಇತರರು ಇ ಸಭೆಯಲ್ಲಿ ಭಾಗವಹಿಸಿದ್ದು ತುಮಕೂರು ಗ್ರಾಮಾಂತರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನರಸಿಂಹಮೂರ್ತಿ ಕೈದಾಳ ರಮೇಶ್ ಸೇರಿದಂತೆ ಇತರರು ಇವೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(Visited 5 times, 1 visits today)