ಕಾಂಗ್ರೆಸ್ ಪಕ್ಷದ 134ನೇ ಸಂಸ್ಥಾಪನಾ ದಿನಾಚರಣೆ

ತುಮಕೂರು:

     ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ 134ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
      ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಂಸ್ಥಾಪನಾ ದಿನವನ್ನು ಆರಂಭಿಸಿದರು.

      ಕಾರ್ಯಕ್ರಮ ಕುರಿತು ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್,ಸ್ವಾತಂತ್ರ ಹೋರಾಟಗಾರರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ 1885ರಲ್ಲಿ ಸ್ಥಾಪಿತವಾದ ಕಾಂಗ್ರೆಸ್ ಆರಂಭದಲ್ಲಿ ರಾಜಕೀಯೇತರ ಸಂಘಟನೆಯಾಗಿ, ಸ್ವಾತಂತ್ರ ಚಳವಳಿಗೆ ಜನರನ್ನು ಒಗ್ಗೂಡಿಸುವ ಕೆಲಸವನ್ನು ಮಾಡಿ, ಹತ್ತಾರು ವರ್ಷಗಳ ನಿರಂತರ ಹೋರಾಟದ ಫಲವಾಗಿ 1947 ರಲ್ಲಿ ದೇಶ ಸ್ವಾತಂತ್ರ ಪಡೆಯುವಂತಾಯಿತು.ಮಹಾತ್ಮಗಾಂಧಿ ಮತ್ತು ಇನ್ನಿತರ ನಾಯಕರ ತ್ಯಾಗ ಮತ್ತು ಹೋರಾಟದ ಫಲವಾಗಿ ದೇಶ ಅಭಿವೃದ್ದಿಯತ್ತ ಸಾಗಿದೆ.ಸ್ವಾತಂತ್ರ ನಂತರದಲ್ಲಿ ರಾಜಕೀಯ ಪಕ್ಷವಾಗಿ ನೊಂದಾಯಿತವಾದ ಕಾಂಗ್ರೆಸ್, ಐವತ್ತು ವರ್ಷಗಳ ಕಾಲ ದೇಶವನ್ನು ಆಳಿ, ವಿಜ್ಞಾನ, ತಂತ್ರಜ್ಞಾನ, ಆಹಾರ, ಕೃಷಿ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ ಮಂಚೂಣಿ ರಾಷ್ಟ್ರವಾಗಿ ಬೆಳೆಯಲು ಸಾಧ್ಯವಾಯಿತು.ನೆಹರು, ಇಂದಿರಾಗಾಂಧಿ, ರಾಜೀವ್‍ಗಾಂಧಿ ಅವರುಗಳು ತಮ್ಮ ಇಡೀ ಜೀವನವನ್ನೇ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಮುಡಿಪಾಗಿಟ್ಟಿದ್ದಾರೆ.ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿ ರಾಹುಲ್‍ಗಾಂಧಿ ಯುವಜನತೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುತ್ತಿದ್ದು,ಇದರ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

     ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಮಾತನಾಡಿ, 1885ರಲ್ಲಿ ಉಮೇಶಚಂದ್ರ ಚಟರ್ಜಿ ಹಾಗೂ ಇನ್ನಿತರ ಸಮಾನ ಮನಸ್ಕ ಗೆಳೆಯರು ಸೇರಿ,ಸ್ವಾತಂತ್ರ ಹೋರಾಟವನ್ನು ತೀವ್ರಗೊಳಿಸಲು ಕಾಂಗ್ರೆಸ್ ಸಂಘಟನೆಯನ್ನು ಹುಟ್ಟು ಹಾಕಿದರು. ಆರಂಭ ದಿಂದಲೂ ದಲಿತರು, ಹಿಂದುಳಿದವರ್ಗದವರು, ಮಹಿಳೆಯರು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಾ ಬಂದಿದೆ ಎಂದರು.

      ಮಾಜಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ಷಷಿ ಅಹಮದ್ ಮಾತನಾಡಿ,ದೇಶದ ಅಭಿವೃದ್ದಿಯಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಮಹತ್ವದ್ದು,134 ವರ್ಷಗಳ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್,ರಾಹುಲ್‍ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ನಂತರ ಯುವಜನರಿಗೆ, ಮಹಿಳೆಯರಿಗೆ ಹೆಚ್ಚಿನ ಅದ್ಯತೆ ನೀಡುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಘಟಿತರಾಗಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಎಲ್ಲರೂ ಪ್ರಯತ್ನಿಸಬೇಕಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ,ಕಾಂಗ್ರೆಸ್ ಪಕ್ಷದ ಇತಿಹಾಸ ತಿಳಿಯದ ಕೆಲವರು, ದೇಶಕ್ಕೆ ಕಾಂಗ್ರೆಸ್ ಕೊಡುಗೆ ಎನು ಎಂದು ಪ್ರಶ್ನಿಸುತ್ತಾರೆ.ಆದರೆ ಇಂದು ದೇಶದಲ್ಲಿ ಅಣೆಕಟ್ಟೆಗಳು,ನೀರಾವರಿ ಯೋಜನೆಗಳು,ಆಹಾರ ಸ್ವಾವಲಂಬನೆ, ಇಂಜಿನಿಯರಿಂಗ್, ಮೆಡಿಕಲ್, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಗಿರುವ ಸಾಧನೆಗೆ ಕಾಂಗ್ರೆಸ್ ಕಾರಣ ಎಂದರು.

      ಕಾಂಗ್ರೆಸ್ ಕಾರ್ಯಕರ್ತರು ಕೇವಲ ಲೆಟರ್‍ಹೆಡ್ ಪದಾಧಿಕಾರಿಗಳಾದರೆ ಸಾಧ್ಯವಿಲ್ಲ.ಪಕ್ಷದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ನಿರ್ಲಕ್ಷಿಸುವ ಎಲ್ಲಾ ಕಾರ್ಯಕರ್ತರನ್ನು ತೆಗೆದು ಹಾಕಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

      ಕಾರ್ಯಕ್ರಮದಲ್ಲಿ ವಿವಿಧ ಮಂಚೂಣಿ ಘಟಕಗಳ ಅಧ್ಯಕ್ಷರಾದ ಇಂದಿರಾ ದೇನಾನಾಯಕ್, ಟಿ.ಬಿ.ಮಲ್ಲೇಶ್, ಟಿ.ಜಿ.ಲಿಂಗರಾಜು, ಪಕ್ಷದ ಉಪಾಧ್ಯಕ್ಷರಾದ ಅಫ್ತಾಬ್ ಅಹಮದ್, ಗೀತಮ್ಮ,ಮಂಜುನಾಥ್,ಮರಿಚನ್ನಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೆಹಬೂಬ್ ಪಾಷ, ಆಟೋ ರಾಜು ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

(Visited 30 times, 1 visits today)

Related posts