ಕಿತ್ತೂರು ರಾಣಿ ಚನ್ನಮ್ಮ ಯುವ ಪೀಳಿಗೆ ಮಹಿಳೆಯರಿಗೆ ಆದರ್ಶ

ತುಮಕೂರು:

      ಕಿತ್ತೂರು ರಾಣಿ ಚನ್ನಮ್ಮ ಬ್ರಿಟೀಷರ ವಿರುದ್ಧ ಹೋರಾಡುವುದರ ಜೊತೆಗೆ ಸಾಮಾಜಿಕ ಚಿಂತನೆಯಲ್ಲೂ ಸಹ ಹಲವಾರು ಮಾರ್ಗದರ್ಶನಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಯುವ ಪೀಳಿಗೆಯ ಮಹಿಳೆಯರಿಗೆ ಆದರ್ಶವಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಹೇಳಿದರು.

      ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಕಿತ್ತೂರು ರಾಣಿ ಚನ್ನಮ್ಮ ಧೈರ್ಯ ಮತ್ತು ಸ್ಥೈರ್ಯಕ್ಕೆ ಹೆಸರುವಾಸಿಯಾಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಮಹಿಳೆಯರ ಸಾಧನೆಗಳು ಇಂದಿನ ಸಮಾಜದಲ್ಲಿ ಮುಂದೆ ಬರಲು ಮಹಿಳೆಯರಿಗೆ ಪ್ರೇರಣೆಯಾಗಿವೆ ಎಂದರು.

      ಕಿತ್ತೂರು ರಾಣಿ ಚನ್ನಮ್ಮ ಅವರಂತಹ ಹೋರಾಟಗಾರರ ಆದರ್ಶಗಳನ್ನು ಇಂದಿನ ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅವರಲ್ಲಿ ದೇಶಾಭಿಮಾನ ತುಂಬಬೇಕು. ಇಂದಿನ ಯುವಜನಾಂಗಕ್ಕೆ ಹಿಂದಿನ ಇತಿಹಾಸ ತಿಳಿಯುವ ಆಸಕ್ತಿಯಿಲ್ಲ. ಮೊಬೈಲ್ ಯುಗದಲ್ಲಿರುವ ಕಾರಣ ಸ್ವಾತಂತ್ರ್ಯ ಹೋರಾಟಗಾರರ ಸಾಧನೆಯ ಬಗ್ಗೆ ತಿಳಿದುಕೊಳ್ಳುವ ಮನಸ್ಸನ್ನು ಕಳೆದುಕೊಂಡಿದ್ದಾರೆ.

      ಹಾಗಾಗಿ ಅವರಲ್ಲಿ ಶಿಕ್ಷಣ ಇಲಾಖೆಯು ಸ್ವಾತಂತ್ರ್ಯ ಹೋರಾಟಗಾರರ ತತ್ವಾದರ್ಶಗಳನ್ನು ತುಂಬುವ ಪ್ರಯತ್ನ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ನರಸಿಂಹರಾಜು, ಕನ್ನಡ ಮತ್ತು ಬಸವರಾಜು ಆಪಿನಕಟ್ಟೆ, ಜಿಲ್ಲಾ ಮಟ್ಟದ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

(Visited 20 times, 1 visits today)

Related posts

Leave a Comment