ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ – ಶಾಸಕ

ತುಮಕೂರು :

      ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕಗಳ ಸಹಯೋಗದಲ್ಲಿ ನಗರದ ಎಸ್.ಐ.ಟಿ ಕಾಲೇಜಿನ ಶ್ರೀ ಶಿವಕುಮಾರಸ್ವಾಮೀಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಸರ್ಕಾರಿ ನೌಕರರಲ್ಲಿ ಅತಿಯಾದ ಒತ್ತಡ ಇರುವುದರಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳುವಲ್ಲಿ ಅನುಕೂಲವಾಗುವುದು ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾಸಕ್ತಿಯನ್ನು ಪ್ರದರ್ಶಿಸಬೇಕು ಎಂದರಲ್ಲದೇ ಕ್ರೀಡಾಕೂಟದಲ್ಲಿ ಭಾಗವಹಿಸಲು ಹೇಗೆ ಉತ್ಸುಕರಾಗಿದ್ದೀರೋ.. ಅದೇ ರೀತಿ ಕಚೇರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡೆ, ಯೋಗ, ವಾಯ್ಯಾಮ, ಆಟೋಟಗಳಲ್ಲಿ ಭಾಗವಹಿಸಿ ಆರೋಗ್ಯವಂತರಾಗಿರಿ ಎಂದು ಹಾರೈಸಿದ ಅವರು ಕ್ರೀಡಾಕೂಟದಲ್ಲಿ ಗೆಲುವಿಗೆ ಮಹತ್ವ ಕೊಡದೆ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

      ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಿಲ್ಲೆಯ 10 ತಾಲೂಕುಗಳಿಂದ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿ.ರುದ್ರಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ನರಸಿಂಹರಾಜು, ನಿರ್ದೇಶಕ ಹೆಚ್.ಕೆ ನರಸಿಂಹಮೂರ್ತಿ ಉಪಸ್ಥಿತರಿದ್ದರು. 

(Visited 1 times, 1 visits today)

Related posts

Leave a Comment