ಕೊರಟಗೆರೆ :


      ಚಾಲಕನ ಅತಿವೇಗ ಚಾಲನೆ ಮತ್ತು ದಿವ್ಯ ನಿರ್ಲಕ್ಷದಿಂದ ಸರಕಾರಿ ಬಸ್ ಬಿಕ್ಷುಕ ಮತ್ತು ರೈತನ ಮೇಲೆ ಹರಿದು ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿರ್ವಾಹಕ ಸೇರಿದಂತೆ ಬಸ್ಸಿನಲ್ಲಿದ್ದ ನಿರ್ವಾಹಕ ಸೇರಿದಂತೆ 8ಜನ ಪ್ರಯಾಣಿಕರಿಗೆ ಗಂಬೀರ ಗಾಯವಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ನಡೆದಿದೆ.

ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತೀದ್ದ ಕೆಎಸ್‍ಆರ್‍ಟಿಸಿ ಬಸ್ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂಯ ಕಾಶಾಪುರ ಗೇಟ್‍ನ ಸಮೀಪದ ಮುಖ್ಯರಸ್ತೆಯ ತಿರುವಿನಲ್ಲಿ ಚಾಲಕನ ಅಜಾಗರುಕತೆಯ ಚಾಲನೆಯಿಂದ ಅಪಘಾತಮಾಡಿ ಸ್ಥಳದಿಂದ ಪರಾರಿ ಆಗಿದ್ದಾನೆ.

      ಸರಕಾರಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅಪರಿಚಿತ ಬಿಕ್ಷುಕ ಸ್ಥಳದಲ್ಲಿಯೇ ಮೃತಪಟ್ಟರೇ ದ್ವೀಚಕ್ರ ವಾಹನದಲ್ಲಿ ನಿಂತಿದ್ದ ರೈತ ಗೋಪಾಲನಾಯ್ಕ ಸಾರ್ವಜನಿಕ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಅಪಘಾತ ಮಾಡಿದ ಸರಕಾರಿ ಬಸ್ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ನಿರ್ವಾಹಕ ಸೇರಿದಂತೆ ಬಸ್ಸಿನಲ್ಲಿದ್ದ 8ಜನರಿಗೆ ಗಂಬೀರ ಗಾಯವಾಗಿವೆ.

       ಕಾಶಾಪುರ ಗೇಟ್‍ನ ತಿರುವಿನಲ್ಲಿ ವರ್ಷಕ್ಕೆ ಹತ್ತಾರು ಅಪಘಾತ ಆಗಲಿದೆ. ಸಾರಿಗೆ ಮತ್ತು ಪಿಡ್ಲ್ಯೂಡಿ ಇಲಾಖೆ ಅಪಘಾತ ತಡೆಯುವಲ್ಲಿ ಸಂಪೂರ್ಣ ವಿಫಲ ಆಗಿದ್ದಾರೆ. ಅಪಘಾತ ವಲಯದ ನಾಮಫಲಕ ಹಾಕುವಂತೆ ಸ್ಥಳೀಯರು ಆಗ್ರಹ ಮಾಡಿದ್ದಾರೆ. ಕಾಶಪುರ ಅಪಘಾತ ಮಾಡಿದ ಸರಕಾರಿ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಪ್ರಾರಂಭ ಮಾಡಿದ್ದಾರೆ.

      ಅಪಘಾತದಲ್ಲಿ ಮೃತಪಟ್ಟ ಅಪರಿಚಿತ ಬಿಕ್ಷುಕನನ್ನು ತುಮಕೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸರಕಾರಿ ಬಸ್ ಚಾಲಕನ ವಿರುದ್ದ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(Visited 11 times, 1 visits today)