ಮಧುಗಿರಿ:

      ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್ 19 ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮನ ಜಾತ್ರಾ ಮಹೋತ್ಸವವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿ ಡಾ.ಕೆ.ನಂದಿನಿ ದೇವಿ ತಿಳಿಸಿದರು.

      ಪಟ್ಟಣದ ಉಪವಿಭಾಗಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರಕಾರವು ಈಗಾಗಲೇ ಒಂದು ವಾರದವರೆವಿಗೂ ಎಲ್ಲಾ ರೀತಿಯ ಸಭೆ ಸಮಾರಂಭ ಜಾತ್ರೆ, ವಿವಾಹ ಮತ್ತಿತರ ಜನ ಸೇರುವ ಸಮಾರಂಭಗಳನ್ನು ರದ್ಧುಪಡಿಸುವಂತೆ ಆದೇಶಿಸಿದೆ. ಈ ಆದೇಶದ ಆನ್ವಯ 10 ದಿನಗಳ ಕಾಲ ನಡೆಯಬೇಕಾಗಿದ್ದ ಜಾತ್ರ ಮಹೋತ್ಸವನ್ನು ಹಾಗೂ ತಾಲ್ಲೂಕಿನಲ್ಲಿ ನಡೆಯುವ ಸಂತೆಗಳನ್ನು ಸಹ ರದ್ಧುಪಡಿಸಲಾಗಿದೆ.

 

      ಆದರೆ ದಂಡಿನ ಮಾರಮ್ಮನ ಜಾತ್ರೆಯಲ್ಲಿ ಸಾವಿರಾರು ಜನ ಸೇರಿ ವಿಶೇಷವಾಗಿ ಆಚರಿಸುವ ಬೆಳ್ಳಿ ಪಲ್ಲಕ್ಕಿ ಮತ್ತು ಆಗ್ನಿಕುಂಡ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಸಹ ರದ್ಧುಪಡಿಸಲಾಗಿದೆ. ದೇವಸ್ಥಾನದಲ್ಲಿ ಎಂದಿನಂತೆ ಸರಳವಾಗಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ತಾಲ್ಲೂಕಿನ ಜನರು ಮಾರಕ ರೋಗವಾದ ಕರೋನಾ ಬಗ್ಗೆ ಆತಂಕ ಪಡುವುದು ಬೇಡ ಆರೋಗ್ಯ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಮುಂಜಾಗರೂಕತೆಯ ಕ್ರಮಗಳನ್ನು ಕೈಗೊಂಡಿದೆ ಎಂದರು.

 

(Visited 53 times, 1 visits today)