ಚಿಕ್ಕನಾಯಕನಹಳ್ಳಿ:

      2020-21 ನೇ ಶೈಕ್ಷಣಿಕ ವರ್ಷವನ್ನು ವಿಶೇಷ ರೀತಿಯಲ್ಲಿ ಸ್ವಾಗತಕೋರುವ ಮೂಲಕ ಸರ್ಕಾರಿ ಶಾಲೆಗಳು ಆರಂಭಗೊಂಡವು.

      ಕೊರೋನಾ ಸೋಂಕಿನ ಭೀತಿಯಿಂದ ಕಳೆದ ಎಂಟು ತಿಂಗಳಿಂದ ಮುಚ್ಚಿದ್ದ ಶಾಲೆಗಳಿಗೆ ಜ.1 ರಿಂದ ವಿವಿಧ ಸುರಕ್ಷತಾ ನಿಯಮಗಳ ಕಡ್ಡಾಯ ಪಾಲನೆಯೊಂದಿಗೆ ಶಾಲೆಗಳನ್ನು ತೆರೆಯಲು ಆದೇಶಬಂದ ಕಾರಣ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ಉತ್ಸಾಹದ ವಾತಾವರಣ ನಿರ್ಮಾಣವಾಗಿತ್ತು.

       ಪೋಷಕರು ಹಾಗೂ ವಿದ್ಯಾರ್ಥಿಗಳಿಂದಲೂ ಹೆಚ್ಚಿನ ಬೆಂಬಲ ವ್ಯಕ್ತವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಗಳನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಂಡರು. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಕಲ್ಲುಬಾವಿ ಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾಗಮ ಕಾರ್ಯಕ್ರಮದ ಬೋದನೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕೆಂಬಾಳ್ ರಮೇಶ್ ಗುಲಾವಿ ಹೂ ನೀಡುವ ಮೂಲಕ ಬರಮಾಡಿಕೊಂಡರು. ಶಾಲೆಯನ್ನು ಹಿಂದಿನ ದಿನಸ್ವಚ್ಚಗೊಳಿಸಿ, ಎಲ್ಲಾ ಕೊಠಡಿ, ಪ್ರಾಂಗಣ, ಊಟದ ಕೋಣೆ ಹಾಗೂ ಶೌಚಾಲಯವನ್ನು ಸ್ಯಾನಿಟೈಸರ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಉಷ್ಣತೆ ತಪಾಸಣೆ, ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಹಾಗೂ ಸಾಮಾಜಿಕ ಅಂತರಗಳ ಪಾಲನೆಯೊಂದಿಗೆ ಬರಮಾಡಿಕೊಳ್ಳಲಾಯಿತು.

      ತಾಲ್ಲೂಕಿನ ಹುಳಿಯಾರು ಹೋಬಳಿ ದಬ್ಬಗುಂಟೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಸದಸ್ಯ ರವಿಕುಮಾರ್ ರವರು ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್‍ಗಳನ್ನು ಉಚಿತವಾಗಿ ನೀಡುವ ಮೂಲಕ ವಿದ್ಯಾರ್ಥಿಗಳ ಉತ್ಸಾಹಕ್ಕೆ ಪ್ರೋತ್ಸಾಹ ನೀಡಿದರು.
ಶಾಲೆ ಆರಂಭದ ಹಿನ್ನಲೆಯಲ್ಲಿ ತಾಲ್ಲೂಕಿನ ಜಯಚಾಮರಾಜಪುರ ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ರಾಕೇಶ್‍ಕುಮಾರ್ ರವರು ಭೇಟಿ ನೀಡಿ ಕೋವಿಡ್19ನ ಸರ್ಕಾರಿ ಮಾರ್ಗಸೂಚಿಯ ಪಾಲನೆಗಳ ಪರಿಶೀಲನೆ ನಡೆಸಿದರು.

(Visited 7 times, 1 visits today)