ಚುನಾವಣೆಗೆ ಎರಡೇ ದಿನ ಇರುವಾಗ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಅಭ್ಯರ್ಥಿ..?

ರಾಮನಗರ: 

ಕಾರ್ಯಕರ್ತರು ಕಂಗಾಲು

      ಚುನಾವಣೆಯ ಹೊಸ್ತಿಲಿನಲ್ಲಿಯೇ ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಭಾರಿ ಆಘಾತ ಎದುರಾಗಿದೆ.

      ಚುನಾವಣೆಗೆ ಕೇವಲ ಎರಡೇ ದಿನ ಬಾಕಿ ಇರುವಾಗಲೇ ರಾಮನಗರ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಮರಳಿ ಸೇರ್ಪಡೆಗೊಂಡು ಬಿಜೆಪಿ ಭಾರಿ ಮುಖಭಂಗ ಉಂಟುಮಾಡಿದ್ದಾರೆ. ಈ ಮೂಲಕ ಉಪ ಚುನಾವಣೆಗೆ ಭಾರಿ ಟ್ವಿಸ್ಟ್ ಸಿಕ್ಕಿದೆ.

       ಬೆಂಗಳೂರಿನ ಸದಾಶಿವನಗರದಲ್ಲಿ ಸಂಸದ ಡಿ.ಕೆ.ಸುರೇಶ್​ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್  ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವುದಾಗಿ ಘೋಷಿಸಿದ್ದಾರೆ. 

      ಕಾಂಗ್ರೆಸ್‌ನ ಪ್ರಮುಖ ಮುಖಂಡನನ್ನೇ ಪಕ್ಷಕ್ಕೆ ಸೆಳೆದುಕೊಂಡು ಸಮ್ಮಿಶ್ರ ಸರ್ಕಾರದ ವಿರುದ್ಧದ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಲು ಬಿಜೆಪಿ ಪ್ರಯತ್ನಿಸಿತ್ತು. ಆದರೆ, ಈಗ ಅದರ ಬಾಣವೇ ಹಿಂದಿರುಗಿ ಬಂದು ಬಿಜೆಪಿಗೆ ತಗುಲಿದೆ.

 

(Visited 9 times, 1 visits today)

Related posts

Leave a Comment