BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ
  • ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ
  • ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್!
Trending

ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್!

By News Desk BenkiyabaleUpdated:December 26, 2019 6:23 pm

ತುಮಕೂರು :

      ಎಲ್ಲಾ ವಿಭಾಗದ ರೈತರು, ಕೃಷಿಕೂಲಿಕಾರರನ್ನು ಸಾಲದಿಂದ ಸಂಪೂರ್ಣ ಮುಕ್ತಗೊಳಿಸುವ ಋಣಮುಕ್ತ ಕಾಯ್ದೆ, ಡಾ.ಸ್ವಾಮಿನಾಥನ್ ವರದಿ ಆಧಾರಿತ ಕನಿಷ್ಠ ಬೆಂಬಲಬೆಲೆ ಖಾತರಿಕಾಯ್ದೆ ಜಾರಿ, ಪ್ರವಾಹಪೀಡಿತ ಜನರಿಗೆ ಸೂಕ್ತಪರಿಹಾರ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 8ರಂದು ಗ್ರಾಮೀಣ ಕರ್ನಾಟಕ ಬಂದ್‍ಗೆ ರೈತ-ಕೃಷಿಕೂಲಿಕಾರರ ಸಂಘಟನೆಗಳು ಕರೆ ನೀಡಿವೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರಾಜ್ಯ ಕಾರ್ಯದರ್ಶಿ ಜಿ.ಸಿ.ಬೈಯ್ಯಾರೆಡ್ಡಿ ತಿಳಿಸಿದರು.

      ತುಮಕೂರಿನ ದ್ವಾರಕ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ದೇಶದಲ್ಲಿ ಕೃಷಿಬಿಕ್ಕಟ್ಟು ಹೆಚ್ಚಿದ್ದು ರೈತ ಸಮುದಾಯ ಸಂಕಷ್ಟ ಅನುಭವಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಜನರ ನೆರವಿಗೆ ಬರುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಿಟ್ಟು ಬೇರೆ ವಿಷಯಗಳನ್ನು ಪ್ರಸ್ತಾಪಿಸುತ್ತ ಕಾಲ ಕಳೆಯುತ್ತಿದೆ. ಹೀಗಾಗಿ ರೈತ ಸಮಸ್ಯೆಗಳನ್ನು ನಿವಾರಿಸುವಂತೆ ಗಮನ ಸೆಳೆಯಲು ಬಂದ್ ಆಚರಿಸಲಾಗುತ್ತಿದೆ ಎಂದು ಹೇಳಿದರು.

      ರಾಜ್ಯದ ಎರಡೂ ರೈತ ಸಂಘಟನೆಗಳು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿಕೂಲಿ ಕಾರರ ಸಂಘ, ರೈತ, ಕೃಷಿ ಕಾರ್ಮಿಕರ ಸಂಘಟನೆ, ಆಶಾ- ಕಿಸಾನ್ ಸ್ವರಾಜ್, ಅಖಿಲ ಬಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ಕೃಷಿ ಕಾರ್ಮಿಕರ ಸಂಘ ಹೀಗೆ ದೇಶದ ಸುಮಾರು 200ಕ್ಕೂ ಹೆಚ್ಚು ರೈತ ಸಂಘಟನೆಗಳು ಬಂದ್ ನಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.

      ಎಐಕೆಎಸ್‍ಸಿಸಿ ಜಿಲ್ಲಾ ಸಂಚಾಲಕ ಸಿ.ಯತಿರಾಜು ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಕೃಷಿಬಿಕ್ಕಟ್ಟು ತೀವ್ರವಾಗಿದೆ. ರೈತರು ಸಮಸ್ಯೆಗಳಿಂದ ನರಳುತ್ತಿದ್ದಾರೆ. ಆದರೂ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಯಿತು. ಅಮೂಲ್ಯವಾದ ಮಳೆನೀರನ್ನು ಸಂಗ್ರಹಿಸಿಡುª ಕೆಲಸವನ್ನು ಯಾರೂ ಮಾಡಲಿಲ್ಲ. ಸಣ್ಣನೀರಾವರಿ ಸಚಿವರು ಇದೇ ಜಿಲ್ಲೆಯವರು.
ಅವರು ಹೇಮಾವತಿ ನೀರನ್ನು ಸಮರ್ಪಕವಾಗಿ ಕೆರೆಗಳಿಗೆ ತುಂಬಿಸುವಂತೆಹ ಕೆಲಸವನ್ನು ಮಾಡಲಿಲ್ಲ. ಈ ಬಾರಿಯ ಮಳೆಯ ನೀರನ್ನು ಸಂಗ್ರಹಿಸಿದ್ದರೆ ರೈತರಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೆ ಈಗ ಕೆರೆಯ ನೀರು ಬತ್ತಿಹೋಗಿದೆ. ಇದರಿಂದ ರೈತರು ನೀರಾವರಿ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದರು.

      ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಆಜ್ಜಪ್ಪ, ಅಖಿಲ ಭಾರತ ಕಿಸಾನ್ ಸಭಾದ ಶಶಿಕಾಂತ್, ರೈತ ಮುಖಂಡ ಬಿ.ಉಮೇಶ್, ರೈತ ಸಂಘದ ರಂಗಹನುಮಯ್ಯ ಉಪಸ್ಥಿತರಿದ್ದರು.

(Visited 19 times, 1 visits today)
Previous Articleಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ !!
Next Article ಚಾರ್ಮಾಡಿ ಘಾಟ್ : ಕೆ.ಎಸ್.ಆರ್.ಟಿ.ಸಿ, ಮಿನಿ ಬಸ್ ಸಂಚಾರಕ್ಕೆ ಅನುಮತಿ!!
News Desk Benkiyabale

Related Posts

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm news

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm news

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm news
ತಾಜಾ ಸುದ್ಧಿಗಳು
news

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
news

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm
news

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
Our Youtube Channel
Our Picks

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

By News Desk BenkiyabaleOctober 09, 2026 5:43 pm

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಹುಳಿಯಾರಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು…

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.