ತುಮಕೂರು


ಹಬ್ಬದ ಸಂಭ್ರಮದಲ್ಲಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲೀ ಯುವಕನೊಬ್ಬನ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ತುಮಕೂರು ತಾಲೂಕಿನ ಗ್ರಾಮಾಂತರ ವ್ಯಾಪ್ತಿಯ ಬೆತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಲ್ಲಿ ಮೃತಪಟ್ಟ ಯುವಕನನ್ನ ನಿರಂಜನ್ (೩೦) ಎಂದು ಗುರುತಿಸಲಾಗಿದೆ.ಇನ್ನು ಯುವಕರ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ನಿರಂಜನ್ಗೆ ಕೆಲವರು ಡ್ರ‍್ಯಾಗರ್ನಿಂದ ಚುಚ್ಚಿದ್ದಾರೆ ಎನ್ನಲಾಗಿದೆ ಅದರ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡ ನಿರಂಜನ್ ನನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತು ಎನ್ನಲಾಗಿದೆ ಆದರೆ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟ ನಿರಂಜನ್.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಇನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ರವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಇನ್ನು ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದು ಕೊಲೆ ಮಾಡಿರುವ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.
ಗ್ರಾಮಾAತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ

 

ತುಮಕೂರು ತಾಲೂಕಿನ ಬೆಳೆದರ ಗ್ರಾಮದಲ್ಲಿನ ಯುವಕ ಹನುಮಂತರಾಜು (೨೩) ಎಂಬುವರನ್ನು ರಾಡು ನಿಂದ ಹೊಡೆದು ಕೊಲೆ ಮಾಡಲಾಗಿದೇ ಎನ್ನಲಾಗಿದೆ. ಮೃತಪಟ್ಟ ಯುವಕನಿಗೆ ತಂದೆ ತಾಯಿ ಯಾರು ಇರಲಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದು ಯುವಕ ಒಬ್ಬನೇ ಬೆಳದ ಗ್ರಾಮದಲ್ಲಿ ವಾಸವಾಗಿದ್ದ ಎನ್ನಲಾಗಿದೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

(Visited 1 times, 1 visits today)