ಜಿಲ್ಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರವಾಸ ಕಾರ್ಯಕ್ರಮ

ತುಮಕೂರು :

      ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾಗಿರುವ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ತುಮಕೂರು ಜಿಲ್ಲೆಯಲ್ಲಿ ಫೆಬ್ರವರಿ 19ರಂದು ಕೈಗೊಂಡಿರುವ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮದ ವಿವರ.

      ಮಾನ್ಯ ಮುಖ್ಯಮಂತ್ರಿಗಳು ಬೆಳಿಗ್ಗೆ 8 ಗಂಟೆಗೆ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ (ಹೆಲಿಕ್ಯಾಪ್ಟರ್) ಮೂಲಕ ಪ್ರಯಾಣ ಬೆಳೆಸಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಹೆಲಿಪ್ಯಾಡ್‍ಗೆ 8-45ಕ್ಕೆ ಆಗಮಿಸುವರು. ಮುಖ್ಯಮಂತ್ರಿಗಳು ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದ ವತಿಯಿಂದ ಆಯೋಜಿಸಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು.

         ಬೆಳಿಗ್ಗೆ 9-30ಕ್ಕೆ ನೊಣವಿನಕೆರೆ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಮಾನ್ಯ ಮುಖ್ಯಮಂತ್ರಿಗಳು ಮರುಪ್ರಯಾಣ ಮಾಡುವರು ಎಂದು ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 6 times, 1 visits today)

Related posts

Leave a Comment