ಟಿಪ್ಪು ಜಯಂತಿ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು :

      ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ.

      ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪಕ್ಷದ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದ್ದಾರೆ. ಮುಖ್ಯ ಪ್ರತಿಭಟನೆ ಬೆಂಗಳೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ರಸ್ತೆಯ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪಕ್ಷದ ಮುಖಂಡ ಆರ್. ಅಶೊಕ್, ಸಂಸದ ಪಿ.ಸಿ. ಮೋಹನ್ ಮತ್ತಿತರ ನೇತೃತ್ವದಲ್ಲಿ ನಡೆಯಲಿದೆ.

      ರಾಜ್ಯ ಸರ್ಕಾರ ನವೆಂಬರ್ 10 ರಂದು ಆಚರಿಸಲು ಉದ್ದೇಶಿಸಿರುವ ಟಿಪ್ಪು ಜಯಂತಿಗೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಹಿಂದೆ ದುರ್ಘಟನೆಗಳಿಗೆ ಸಾಕ್ಷಿಯಾಗಿದ್ದ ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆ. ಹುಬ್ಬಳ್ಳಿ – ಧಾರವಾಡ ಮಹಾನಗರ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು, ಶ್ರೀರಂಗಪಟ್ಟಣ ವ್ಯಾಫ್ತಿಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿರುವುದಾಗಿ ಆಯಾ ಜಿಲ್ಲಾಡಳಿತಗಳು ತಿಳಿಸಿವೆ.

(Visited 11 times, 1 visits today)

Related posts

Leave a Comment