ಡಿಕೆಶಿ ಔತಣಕೂಟಕ್ಕೆ ಹೋಗಲ್ಲ : ರಮೇಶ್‌ ಜಾರಕಿಹೊಳಿ

ಬೆಳಗಾವಿ: 

     ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿರುವ ಔತಣ ಕೂಟಕ್ಕೆ ನಾನು ಹೋಗಲ್ಲ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

      ಒಂದೆಡೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ಹಲವು ಪ್ರಮುಖ ನಾಯಕರು ಗೈರಾಗಿದ್ದಾರೆ. ಇನ್ನೊಂದೆಡೆ ಸಚಿವ ಡಿ.ಕೆ.ಶಿವಕುಮಾರ್‌ ಅವರು ಕರೆದಿರುವ ಔತಣಕೂಟದಲ್ಲಿ ನಾನು ಭಾಗಿಯಾಗುವುದಿಲ್ಲ ಎಂದು ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

      ಈ ಮೂಲಕ ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಮುನಿಸು ಹೊರಹಾಕಿದ್ದಾರೆ.
 

(Visited 12 times, 1 visits today)

Related posts