ತುಮಕೂರು:

      ಜಗತ್ತಿನಾದ್ಯಂತ ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯೂ ಇಳಿಮುಖವಾಗಿದೆ.

     ವಿಶ್ವದೆಲ್ಲೆಡೆ ರಣಕೇಕೆ ಹಾಕುತ್ತಿರುವ ಈ ಕೊರೊನಾ ವೈರಸ್ ಸೋಂಕು ತನ್ನ ಕದಂಬ ಬಾಹುಗಳನ್ನು ಎಲ್ಲೆಡೆ ಚಾಚುತ್ತಾ ಸೋಂಕು ಹರಡಲು ಹವಣಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕಾಯಿಲೆಗಳನ್ನು ತೋರಿಸಲು ಆಸ್ಪತ್ರೆಗಳಿಗೆ ತೆರಳುತ್ತಿದ್ದ ರೋಗಿಗಳ ಸಂಖ್ಯೆ ತಾನಾಗಿಯೇ ಕ್ಷೀಣಿಸಿದೆ.

      ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಜನಸಾಮಾನ್ಯರೂ ಸಹ ಜನಸಂದಣಿ ಇರುವಲ್ಲಿ ಹೆಚ್ಚು ಸಮಯ ಬೆರೆಯಬಾರದು ಎಂಬೆಲ್ಲಾ ಅಂಶಗಳನ್ನು ಅರಿತಿರುವುದರಿಂದ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ.

      ಪ್ರತಿನಿತ್ಯ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ರಿಂದ ಮಂದಿ ರೋಗಿಗಳ ಬರುತ್ತಿದ್ದರು. ಆದರೆ ಕೊರೊನಾ ವೈರಾಣು ಸೋಂಕು ಹರಡುತ್ತಿರುವ ಭೀತಿ ಹೆಚ್ಚುತ್ತಿರುವುದರಿಂದ ಅತಿ ಅವಶ್ಯ ಇರುವ ಮಂದಿ ಮಾತ್ರ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗಾಗಿ ಮಂದಿ ಬರುತ್ತಿದ್ದ ರೋಗಿಗಳ ಸಂಖ್ಯೆ ಇದೀಗ ರಿಂದ ಮಂದಿಗೆ ಇಳಿಮುಖವಾಗಿದೆ.

       ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಅವಶ್ಯವಿದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ, ಸಣ್ಣ ಪುಟ್ಟ ಕಾಯಿಲೆಗಳಿಗೆ ಬರಬೇಡಿ ಎಂದು ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಅಪರ ಪ್ರಧಾನ ಕಾರ್ಯದರ್ಶಿಗಳು ಮನವಿ ಮಾಡಿದ್ದಾರೆ ಎಂದು ಜಿಲ್ಲಾ ಸರ್ಜನ್ ಡಾ. ವೀರಭದ್ರಯ್ಯ ತಿಳಿಸಿದ್ದಾರೆ.

      ತುಮಕೂರಿನ ಜಿಲ್ಲಾಸ್ಪತ್ರೆಗೆ ಹೊರ ರೋಗಿಗಳ ವಿಭಾಗದಲ್ಲಿ ಪ್ರತಿನಿತ್ಯ ಸಾವಿರಾರು ಮಂದಿ ಬಂದು ಹೋಗುತ್ತಿದ್ದು, ಇದನ್ನು ನಿಯಂತ್ರಿಸಲು ಸರ್ಕಾರದ ಆದೇಶದಂತೆ ನೋಟಿಸ್ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತೀವ್ರತರ ಕಾಯಿಲೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ, ಸಣ್ಣಪುಟ್ಟ ಕಾಯಿಲೆಗಳಿಗೆ ಬರಬೇಡಿ. ವಿನಾ ಕಾರಣ ಸೋಂಕು ಹರಡುವಿಕೆಗೆ ಸುಲಭ ದಾರಿ ಮಾಡಿಕೊಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

      ಸರ್ಕಾರದ ಆದೇಶವನ್ನು ಮಾರ್ಚ್ ರವರೆಗೆ ಪಾಲಿಸಬೇಕಾಗಿದ್ದು, ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಜನರು ಗುಂಪಾಗಿ ನಿಲ್ಲುವುದು, ಟೋಕನ್‍ಗಾಗಿ ಕ್ಯೂ ನಿಲ್ಲುವುದನ್ನು ತಪ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಅವಶ್ಯವಿದ್ದರೆ ಮಾತ್ರ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗುವುದು.

(Visited 13 times, 1 visits today)