BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಶ್ರೀಗಳ ಗದ್ದುಗೆ ಮೇಲೆ ಶಿವಲಿಂಗ ಪ್ರತಿಷ್ಠಾಪನೆ!!
Trending

ತುಮಕೂರು : ಶ್ರೀಗಳ ಗದ್ದುಗೆ ಮೇಲೆ ಶಿವಲಿಂಗ ಪ್ರತಿಷ್ಠಾಪನೆ!!

By News Desk BenkiyabaleUpdated:November 11, 2019 7:39 pm

ತುಮಕೂರು:

      ಇತಿಹಾಸ ಪ್ರಸಿದ್ಧ ಸಿದ್ದಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿಯಾಗಿದ್ದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಐಕ್ಯ ಸ್ಥಳದ ಗದ್ದುಗೆಯ ಪೀಠದ ಮೇಲೆ ಶಿವಲಿಂಗ ಪ್ರತಿಷ್ಠಾಪಿಸಲಾಯಿತು.

      ಇಂದು ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀಗಳ ಗದ್ದುಗೆಯ ಪೀಠದ ಮೇಲೆ 38 ಇಂಚು ಉದ್ದದ ಶಿವಲಿಂಗವನ್ನು ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಪ್ರತಿಷ್ಠಾಪಿಸಲಾಯಿತು.

      ಪ್ರಾತಃಕಾಲದಿಂದಲೇ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹಲವು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಶಿವಲಿಂಗವನ್ನು ದೈವೀಕರಿಸಿ ಪ್ರತಿಷ್ಠಾಪನೆ ಮಾಡಲಾಯಿತು.

      ಇಂದು ಪ್ರತಿಷ್ಠಾಪಿಸಿದ ಶಿವಲಿಂಗವನ್ನು ಶ್ರೀಗಳು ತಂಗುತ್ತಿದ್ದ ಹಳೇ ಮಠದಲ್ಲಿ ಮಂಡಲದ 48 ದಿನಗಳ ಕಾಲ ಜಲಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ ಹಾಗೂ ಶಯನಾಧಿವಾಸದ ವಿಧಿ-ವಿಧಾನ ಪೂರೈಸಲಾಗಿತ್ತು.

       ಹೀಗೆ ಸಕಲ ವಿಧಿ ವಿಧಾನವನ್ನು ಪೂರೈಸಿ ದೈವೀಶಕ್ತಿಯನ್ನು ಪಡೆದ ಪವಿತ್ರ ಲಿಂಗವನ್ನು ಶ್ರೀಗಳ ಗದ್ದುಗೆಯ ಪೀಠದ ಮೇಲೆ ಇರಿಸಲಾಗಿದೆ.

      ಶ್ರೀಗಳ ಗದ್ದುಗೆ ಮೇಲೆ ಪ್ರತಿಷ್ಠಾಪಿಸಲಾಗಿರುವ ಶಿವಲಿಂಗವು 27 ಇಂಚು ಉದ್ದವಿದ್ದು, ಶ್ರೀಗಳ ಕೈಯಲ್ಲಿನ ಗೇಣು 9 ಇಂಚು ಇತ್ತು. ಆ ಗೇಣಿನ ಮೂರುಪಟ್ಟು ಲಿಂಗವನ್ನು ರೂಪಿಸಲಾಗಿದೆ. ಪಾನ ಬಟ್ಟಲು ಸೇರಿ ಪೂರ್ಣವಾಗಿ ಲಿಂಗ 38 ಇಂಚು ಇದೆ.

       ಶಿವಲಿಂಗ ಪ್ರತಿಷ್ಠಾಪನೆಯ ವಿಧಿ ವಿಧಾನ ಪೂರ್ಣಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ನಮ್ಮ ಗುರುದೇವರಾದ ಶ್ರೀಗಳ ಗದ್ದುಗೆಯ ಮೇಲೆ ಅವರ ಆಶಯದಂತೆ ಅಪೇಕ್ಷೆಯಂತೆ ಮತ್ತು ಭಕ್ತರ ಒತ್ತಾಸೆಯಂತೆ ಇಂದು ಗದ್ದುಗೆಯ ಮೇಲೆ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಗಿದೆ. ಶ್ರೀಗಳು ತಮ್ಮ ಗುರುಗಳ ಗದ್ದುಗೆಯ ಮೇಲೆ ಯಾವ ರೀತಿ ಇದೆಯೋ ಅದೇ ರೀತಿ ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡುವಂತೆ ತಮಗೆ ಆದೇಶಿಸಿದ್ದರು. ಅದರಂತೆ ಇಂದು ಆ ಕಾರ್ಯ ನೆರವೇರಿಸಲಾಗಿದೆ ಎಂದು ಹೇಳಿದರು.

      ಶ್ರೀಗಳು ಇಷ್ಟಲಿಂಗಪೂಜೆಗೆ ಬಹಳ ಒತ್ತುಕೊಡುತ್ತಾ ಪೂಜೆ ನೆರವೇರಿಸಿಕೊಂಡು ಬಂದಿದ್ದರು. ಇಂದು ಶಿವಲಿಂಗ ಪ್ರತಿಷ್ಠಾಪಿಸಿರುವುದು ಅತ್ಯಂತ ಮಹತ್ವದ ಕಾರ್ಯವಾಗಿದೆ ಎಂದರು.

       ಭಾರತೀಯ ಪರಂಪರೆಯ ಯಾವುದೇ ಗದ್ದುಗೆಯ ಮೇಲೆ ಶಿವಲಿಂಗ ಇಡುವ ಪರಂಪರೆ ನಡೆದುಕೊಂಡು ಬಂದಿದೆ ಎಂದು ಅವರು ಹೇಳಿದರು.
      ಶ್ರೀಗಳ ಗದ್ದುಗೆಯ ಮೇಲೆ ಶಿವಲಿಂಗ ಪ್ರತಿಷ್ಠಾಪನಾ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಇತಿಹಾಸ ಪ್ರಸಿದ್ದ ಶ್ರೀಗಳ ಗದ್ದುಗೆಗೆ ಶಾಸ್ತ್ರೋಕ್ತವಾಗಿ ಮಂತ್ರ ಪಠಣ ಮಾಡಿ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಗಿದೆ. ಅತ್ಯಂತ ಮಹತ್ವದ ಶಕ್ತಿ ಪೀಠ ಇದಾಗಿದೆ ಎಂದರು.

ಶಿವಲಿಂಗ ಕಣ್ತುಂಬಿಕೊಂಡ ಭಕ್ತರು:

      ಇಂದು ಮುಂಜಾನೆ ನೆರವೇರಿಸಿದ ಶ್ರೀಗಳ ಗದ್ದುಗೆ ಮೇಲೆ ಶಿವಲಿಂಗ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಜಿಲ್ಲೆ ಸೇರಿದಂತೆ ವಿವಿಧೆಡೆ ಭಕ್ತ ಸಮೂಹ ಹರಿದು ಬಂದಿತ್ತು.

     ರಾತ್ರಿಯೇ ಶ್ರೀಮಠಕ್ಕೆ ಬಂದು ತಂಗಿದ್ದ ಭಕ್ತಾದಿಗಳು ಶಿವಲಿಂಗ ಪ್ರತಿಷ್ಠಾಪನೆಯ ಪ್ರತಿಯೊಂದು ಪೂಜಾ ವಿಧಿ ವಿಧಾನವನ್ನು ಕಣ್ತುಂಬಿಕೊಂಡು ಶ್ರೀಗಳ ಗದ್ದುಗೆ ಮೇಲಿನ ಶಿವಲಿಂಗ ದರ್ಶನ ಪಡೆದರು.

     ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಶಾಸಕ ಜ್ಯೋತಿಗಣೇಶ್, ಗಣ್ಯರು, ಶ್ರೀಮಠದ ಮಕ್ಕಳು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನಕೆಂಕೆರೆ ಸಂಗಡಿಗರು ವಚನ ಗಾಯನ ನಡೆಸಿಕೊಟ್ಟರು.

(Visited 36 times, 1 visits today)
Previous Articleತುರುವೇಕೆರೆಗೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ!!
Next Article ಜಿಲ್ಲೆಯಲ್ಲಿರುವ ದಲಿತರ ಸ್ಮಶಾನ ಭೂಮಿ ಅಭಿವೃದ್ಧಿಪಡಿಸಲಾಗುವುದು: ಡಿಸಿ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.