ತುಮಕೂರು : ಸುಸೂತ್ರವಾಗಿ ನಡೆದ ಸಿಇಟಿ ಪರೀಕ್ಷೆ!!

ತುಮಕೂರು :

      ಜಿಲ್ಲೆಯ ತುಮಕೂರು ನಗರದ 13 ಹಾಗೂ ತಾಲ್ಲೂಕು ಕೇಂದ್ರಗಳ 8 ಸೇರಿದಂತೆ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಸಿಇಟಿ ಪರೀಕ್ಷೆಯು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆದಿದೆ.

      ಇಂದು ಬೆಳಿಗ್ಗೆ ನಡೆದ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ 7166 ವಿದ್ಯಾರ್ಥಿಗಳು ಹಾಜರಾಗಿದ್ದು, 805 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

      ಮಧ್ಯಾಹ್ನ ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ 7164 ವಿದ್ಯಾರ್ಥಿಗಳು ಹಾಜರಾಗಿದ್ದು, 807 ಮಂದಿ ವಿದ್ಯಾರ್ಥಿಗಳು ಗೈರಾಗಿರುತ್ತಾರೆ, ಪರಿಕ್ಷೆಯು ಜಿಲೆಯಲ್ಲಿ ಶಾಂತಿಯುತವಾಗಿ ನಡೆದಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್.ಕೆ. ನರಸಿಂಹಮೂರ್ತಿ ಅವರು ತಿಳಿಸಿದ್ದಾರೆ.

(Visited 7 times, 1 visits today)

Related posts