ದತ್ತಪೀಠ ವಿವಾದ: ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್ ತೀರ್ಮಾನ

ಬೆಂಗಳೂರು:

      ದಶಕಗಳ ಕಾಲದಿಂದ ವಿವಾದದ ಗೂಡಾಗಿರುವ ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿ ಕ್ಷೇತ್ರದ ವಿವಾದ ಕುರಿತಂತೆ ದಶಕಗಳ ಬಳಿಕ ಮತ್ತೆ ವಿಚಾರಣೆ ನಡೆಸಲು ಹೈಕೋರ್ಟ್ ಮುಂದಾಗಿದೆ.

      ಶುಕ್ರವಾರ ಈ ಕುರಿತು ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್‌ನಲ್ಲಿ ಈಗಾಗಲೇ ನಡೆಯುತ್ತಿರುವ ನ್ಯಾಯಾಂಗ ನಿಂದನಾ ಅರ್ಜಿಯನ್ನು ಪರಿಗಣಿಸಿಕೊಂಡೇ ಅರ್ಜಿ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿತು.

      ಸುಪ್ರೀಂಕೋರ್ಟ್‌ನಲ್ಲಿರುವ ನ್ಯಾಯಾಂಗ ನಿಂದನೆ ಅರ್ಜಿಯು ಈ ವಿಚಾರಣೆಗೆ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದೆ. ಅರ್ಜಿದಾರರು ಹಾಗೂ ಸರ್ಕಾರಿ ವಕೀಲರ ಅಭಿಪ್ರಾಯ ದಾಖಲಿಸಿಕೊಂಡು ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.

 

 

(Visited 18 times, 1 visits today)

Related posts

Leave a Comment