ದಾಖಲೆ ಇಲ್ಲದೆ ಹಣ ಸಾಗಾಟ – 11ಲಕ್ಷ ರೂ.ನಗದು ವಶ

ಬಳ್ಳಾರಿ :

        ಲೋಕಸಭೆ ಉಪ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 11  ಲಕ್ಷ ರೂ.ನಗದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
      ಬಳ್ಳಾರಿ ಜಿಲ್ಲೆಯಲ್ಲಿ ಸಾರಿಗೆ ಇಲಾಖೆ ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
11 ಲಕ್ಷ ರೂ.ಗಳನ್ನು ಮರಿಯಮ್ಮನಹಳ್ಳಿ ಚೆಕ್ ಪೋಸ್ಟ್ ಬಳಿ ವಶಪಡಿಸಿಕೊಳ್ಳಲಾಗಿದೆ.

       ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಿ ಹಣ ಖಜಾನೆಯಲ್ಲಿಡಲಾಗಿದೆ. ಈ ದಾಳಿಯ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಝಹೀರ್ ಅಬ್ಬಾಸ್, ತಾಲ್ಲೂಕು ನೋಡಲ್ ಅಧಿಕಾರಿ ರಾಜಪ್ಪ, ತಹಸೀಲ್ದಾರ್ ರೆಹಮಾನ ಪಾಷಾ ಹಾಗೂ ಎಂಸಿಸಿ ನೋಡಲ್ ಅಧಿಕಾರಿ ವಿಶ್ವನಾಥ್ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಎಸ್‌ಎಸ್ಟಿ ತಂಡದವರು ಇದ್ದರು

(Visited 8 times, 1 visits today)

Related posts