BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದೇವರಾಯನದುರ್ಗದ ಕುಂಭಾಭಿಷೇಕ : ಟ್ರಾಫಿಕ್ ಸಮಸ್ಯೆಯಾಗದಂತೆ ಡಿಸಿ ಸೂಚನೆ!!
Trending

ದೇವರಾಯನದುರ್ಗದ ಕುಂಭಾಭಿಷೇಕ : ಟ್ರಾಫಿಕ್ ಸಮಸ್ಯೆಯಾಗದಂತೆ ಡಿಸಿ ಸೂಚನೆ!!

By News Desk BenkiyabaleUpdated:November 16, 2019 6:29 pm

ತುಮಕೂರು:

      ದೇವರಾಯನದುರ್ಗ ಗ್ರಾಮದಲ್ಲಿ ಫೆಬ್ರವರಿ ಮಾಹೆಯ 13, 14 ಮತ್ತು 15ರಂದು ನಡೆಯುವ ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ಕುಂಭಾಭಿಷೇಕ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ಮುಂಜಾಗ್ರತಾ ಕ್ರಮವಾಗಿ ಟ್ರಾಫಿಕ್ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

     ದೇವರಾಯನದುರ್ಗ ಗ್ರಾಮದ ಯಾತ್ರಿ ನಿವಾಸದಲ್ಲಿಂದು 12 ವರ್ಷಗಳಿಗೊಮ್ಮೆ ನಡೆಯುವ ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ “ಕುಂಭಾಭಿಷೇಕ” ಮಹೋತ್ಸವದ ಹಿನ್ನೆಲೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕುಂಭಾಭಿಷೇಕಕ್ಕೂ ಮುನ್ನ ರಥ ಬೀದಿ ಹಾಗೂ ಇತರೆ ರಸ್ತೆಗಳನ್ನು ದುರಸ್ತಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಹಿಂದೆ ಕುಂಭಾಭಿಷೇಕ ಕಾರ್ಯಗಳನ್ನು ನಿರ್ವಹಿಸುತ್ತಿದ್ದ ರೀತಿಯಲ್ಲಿಯೇ ಈ ಬಾರಿಯೂ ನೆರವೇರಿಸಬೇಕು. ಅದರಲ್ಲಿ ಯಾವುದೇ ಬದಲಾವಣೆಗಳು ಬೇಡ. ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ ಕಾರ್ಯಕ್ರಮವನ್ನು ನೆರವೇರಿಸಲು ದಾನಿಗಳಿಂದ ನಿರ್ವಹಿಸುವ ಕಾಮಗಾರಿಗಳಿಗೆ ಹೊಸ ಮುಚ್ಚಳಿಕೆ ಪತ್ರ ತೆಗೆದುಕೊಳ್ಳುವುದು ಬೇಡ. ಈ ಹಿಂದೆ ದಾನಿಗಳು ಹೇಗೆ ಮಾಡುತ್ತಿದ್ದರೋ ಅಥವಾ ಯಾರಿಗೆ ದೇವರ ಕಾರ್ಯ ಮಾಡಬೇಕೆನ್ನುವ ಆಸಕ್ತಿ ಇರುತ್ತದೋ ಅವರಿಗೆ ಅವಕಾಶ ನೀಡಬೇಕೆಂದು ದೇವಾಲಯದ ಕಾರ್ಯನಿರ್ವಾಕ ಅಧಿಕಾರಿ ಸವಿತಾ ಅವರಿಗೆ ನಿರ್ದೇಶನ ನೀಡಿದರು.

      ಶ್ರೀ ಭೋಗನರಸಿಂಹಸ್ವಾಮಿ ದೇವಾಲಯದ ಪಕ್ಕದಲ್ಲಿರುವ ಪ್ರಸಾದ ನಿಲಯವನ್ನು ಕಲ್ಯಾಣ ಮಂಟಪವನ್ನಾಗಿ ನಿರ್ಮಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಕುರಿತು ಸವಿತಾ ಪ್ರಸ್ತಾಪಿಸಿದಾಗ, ಕುಂಭಾಭಿಷೇಕದ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳದೆ ಇದ್ದರೆ ಪ್ರಸಾದ ನಿಲಯವನ್ನೇ ವ್ಯವಸ್ಥಿತವಾಗಿ ಸರಿಪಡಿಸಬೇಕೆಂದರು.

      ದೇವಾಲಯಕ್ಕೆ ಸೇರಿದ ಕಾಟೇಜಿನಲ್ಲಿ ನಡೆಸಲಾಗುತ್ತಿರುವ ಅಂಗನವಾಡಿ ಹಿಂಭಾಗ ಸ್ನಾನದ ಗೃಹ ಮತ್ತು ಶೌಚಾಲಯವನ್ನು ನಿರ್ಮಿಸಲು ಅನುಮತಿ ನೀಡಬೇಕೆಂದು ಕಾಟೇಜಿನ ದಾನಿ ಮನವಿ ಮಾಡಿದಾಗ, ಅಂಗನವಾಡಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಿ ಎಂದು ಡಿಸಿ ಸೂಚಿಸಿದರು.

      ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ಕಳಾಕರ್ಷಣೆಯನ್ನು ನವೆಂಬರ್ 22ರಂದು ನಡೆಸುವ, ಶ್ರೀ ಕ್ಷೇತ್ರದ ಬ್ರಹ್ಮರಥೋತ್ಸವ ರಥದ ನಿಲುಗಡೆ ಸ್ಥಳವನ್ನು ತಗ್ಗಿಸಿ ಸಮತಟ್ಟು ಮಾಡಿಸಿ ಸುಭದ್ರತೆ ಮಾಡುವ, ಶ್ರೀ ಭೋಗನರಸಿಂಹಸ್ವಾಮಿ ದೇವಾಲಯದ ಪ್ರಾಕಾರದಲ್ಲಿ ಗ್ರಿಲ್ ಅಳವಡಿಸುವ, ದೇವಾಲಯದಲ್ಲಿರುವ ಅನುಪಯುಕ್ತ ಸಾಮಗ್ರಿಗಳನ್ನು ವಿಲೇವಾರಿ ಮಾಡುವ, ನೂತನ ನಿತ್ಯ ಅನ್ನಸಂತರ್ಪಣಾ ಭವನದ ಮೇಲ್ಭಾಗದ ಕೊಠಡಿಗಳಿಗೆ ಪೀಠೋಪಕರಣಗಳನ್ನು ಹಾಗೂ ಇತರೆ ಅವಶ್ಯಕ ವಸ್ತುಗಳನ್ನು ಖರೀದಿ ಸೇರಿದಂತೆ ಹಲವಾರು ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಿ ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಲಾಯಿತು.

      ಸಭೆಯಲ್ಲಿ ಜಿಲ್ಲಾ ಉಪವಿಭಾಗಾಧಿಕಾರಿ ಸಿ.ಎಲ್. ಶಿವಕುಮಾರ್, ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ವ್ಯವಸ್ಥಾಪನ, ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಎನ್.ನರಸಿಂಹಭಟ್ಟರ್, ಶ್ರೀ ಭೋಗನರಸಿಂಹಸ್ವಾಮಿ ದೇವಾಲಯದ ವೆಂಕಟರಾಜಭಟ್ಟರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕುಂಭಾಭಿಷೇಕ ಮಹೋತ್ಸವದ ದಾನಿಗಳು, ಮತ್ತಿತರರು, ಉಪಸ್ಥಿತರಿದ್ದರು.

(Visited 24 times, 1 visits today)
Previous Articleಮಧುಗಿರಿ : ಹೆಣ್ಣು ಚಿರತೆ ಸೆರೆ!!
Next Article ಬಡಾವಣೆವಾರು ನಾಗರಿಕ ಸಮಿತಿಗಳನ್ನು ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಣಯ
News Desk Benkiyabale

Related Posts

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news
ತಾಜಾ ಸುದ್ಧಿಗಳು
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm
news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
Our Youtube Channel
Our Picks

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

By News Desk BenkiyabaleOctober 17, 2026 6:00 pm

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.