BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಜಿಲ್ಲಾಡಳಿತ ಕ್ರಮ: ಡೀಸಿ
ತುಮಕೂರು ಜಿಲ್ಲಾ ಸುದ್ಧಿಗಳು

ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಜಿಲ್ಲಾಡಳಿತ ಕ್ರಮ: ಡೀಸಿ

By News Desk BenkiyabaleUpdated:November 15, 2018 6:12 pm

 ತುಮಕೂರು :

      ತುಮಕೂರು ಜಿಲ್ಲೆಯಲ್ಲಿ ದೋಷರಹಿತ ಮತದಾರರ ಪಟ್ಟಿ ಸಿದ್ದಪಡಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್‍ಕುಮಾರ್ ತಿಳಿಸಿದರು.

      ನಗರದಲ್ಲಿಂದು ಸ್ವೀಪ್ ಕಾರ್ಯಕ್ರಮದಡಿ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಆಯೋಜಿಸಿದ್ದ ಸಾರ್ವಜನಿಕರಿಗೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ಕುರಿತು ಜಾಗೃತಿ ಮೂಡಿಸುವ ಸೈಕಲ್ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

      ಈ ಹಿಂದೆ ನಡೆದ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿರುವುದು, ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ವರ್ಗಾವಣೆಗೊಂಡಿರುವುದು ಮತ್ತಿತರ ಲೋಪದೋಷಗಳಿಂದ ಮತದಾರರಲ್ಲಿ ತೀವ್ರ ಗೊಂದಲಗಳು ಉಂಟಾಗಿತ್ತು. ಇದನ್ನು ಸರಿಪಡಿಸಲು ಮತದಾರರಲ್ಲಿ ಜಾಗೃತಿ ಮೂಡಿಸಿ, ದೋಷರಹಿತ ಮತದಾರರ ಪಟ್ಟಿ ಸಿದ್ದಪಡಿಸುವ ಉದ್ದೇಶದಿಂದ ಈ ಸೈಕಲ್ ಜಾಥಾವನ್ನು ಆಯೋಜಿಸಲಾಗಿದೆ ಎಂದರು.

      ಈಗಾಗಲೇ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಸಲಾಗುತ್ತಿದ್ದು, ದಿನಾಂಕ:1-1-2019ಕ್ಕೆ 18 ವರ್ಷ ಪೂರ್ಣಗೊಳ್ಳುವ ಅರ್ಹ ಮತದಾರರು ನೋಂದಣಿಗಾಗಿ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 20ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

      ಅರ್ಹ ಮತದಾರರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಲು ನಮೂನೆ 6, ಹೆಸರು ತೆಗೆದು ಹಾಕಲು ನಮೂನೆ 7, ತಿದ್ದುಪಡಿ ಮಾಡಲು ನಮೂನೆ 8 ಹಾಗೂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯೊಳಗೆ ಸ್ಥಳಾಂತರ ಮಾಡಲು ನಮೂನೆ 8ಎರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು.

     ಬರುವ ಭಾನುವಾರ ಮತಗಟ್ಟೆ ಮಟ್ಟದ ಅಧಿಕಾರಿಗಳು ಆಯಾ ಮತಗಟ್ಟೆಯಲ್ಲಿ ಲಭ್ಯವಿದ್ದು, ಅರ್ಹ ಮತದಾರರು ನಿಗಧಿತ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಿ, ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಸಹಕರಿಸಬೇಕೆಂದು ಜಿಲ್ಲೆಯ ಮತದಾರರಿಗೆ ಮನವಿ ಮಾಡಿದರು. ಅಲ್ಲದೆ ಇದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಸಹಕಾರಿಯಾಗಲಿದೆ ಎಂದರು.

      ಜಿಲ್ಲಾ ಪಂಚಾಯತ್ ಸಿಇಓ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಉಂಟಾಗುವ ಲೋಪದೋಷ, ಗೊಂದಲಗಳನ್ನು ತಡೆಯುವ ಸಲುವಾಗಿ ಮತದಾರರಲ್ಲಿ ಅರಿವು ಮೂಡಿಸಲು ಈ ಸೈಕಲ್ ಜಾಥಾ ನಡೆಸಲಾಗುತ್ತಿದೆ. ನ.20ರವರೆಗೆ ಮತದಾರರ ಪಟ್ಟಿಯಲ್ಲಿನ ಲೋಪದೋಷ ಸರಿಪಡಿಸಲು ಅವಕಾಶ ಕಲ್ಪಿಸಲಾಗಿದ್ದು, ಮತದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

       ನಗರದ ಜ್ಯೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ಸೈಕಲ್ ಜಾಥಾಕ್ಕೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ: ದೇವರಾಜು ಹಸಿರು ನಿಶಾನೆ ತೋರಿದರು.

         ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಸಿಇಓ ಅನೀಸ್ ಕಣ್ಮಣಿ ಜಾಯ್ ಅವರು ಶಾಲಾ ಮಕ್ಕಳೊಂದಿಗೆ ಸೈಕಲ್ ತುಳಿಯುವ ಮೂಲಕ ಜಾಥಾದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜ್ಯೂನಿಯರ್ ಕಾಲೇಜು ಮೈದಾನದಿಂದ ಹೊರಟ ಸೈಕಲ್ ಜಾಥಾವು ಬಿ.ಹೆಚ್.ರಸ್ತೆ, ಟೌನ್‍ಹಾಲ್, ಅಶೋಕ ರಸ್ತೆ, ಚರ್ಚ್ ಸರ್ಕಲ್, ಹೊರಪೇಟೆ, ಕೋತಿತೋಪು, ಡಾ: ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಮೂಲಕ ಮಹಾತ್ಮಗಾಂಧಿ ಕ್ರೀಡಾಂಗಣ ತಲುಪಿತು.

      ಸೈಕಲ್ ಜಾಥಾದಲ್ಲಿ ಪಾಲ್ಗೊಂಡಿದ್ದ ಸುಮಾರು 500ಕ್ಕೂ ಅಧಿಕ ಶಾಲಾ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಸಹ ಮಾಡಲಾಗಿತ್ತು. ಜಾಥಾದಲ್ಲಿ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ರಾಜಕುಮಾರ್, ನಿರ್ಮಿತಿ ಕೇಂದ್ರದ ರಾಜಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಡಿಡಿಪಿಐ ಮಂಜುನಾಥ್, ಬಿಇಓ ರಂಗದಾಸಪ್ಪ, ವಾಸಂತಿ ಉಪ್ಪಾರ್, ಹನುಮನಾಯಕ್, ಶ್ರೀನಿವಾಸ್, ಜಿ.ಪಂ. ಉಪಕಾರ್ಯದರ್ಶಿ ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

(Visited 16 times, 1 visits today)
Previous Articleಹಾಲುಗಲ್ಲದ ಹಸುಗೂಸನ್ನ ಪೊದೆಯಲ್ಲಿಟ್ಟಿದ್ಯಾರು ಗೊತ್ತಾ..?
Next Article ಎಂಪ್ರೆಸ್ ಶಾಲೆಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆ ದಿನ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.