ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಇಂದು ಕರಡು ಮತದಾರರ ಪಟ್ಟಿ ಪ್ರಕಟ

 ತುಮಕೂರು:

      ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ತಿಪಟೂರು/ ಶಿರಾ ನಗರಸಭೆ, ಕುಣಿಗಲ್/ ಪಾವಗಡ ಪುರಸಭೆ, ತುರುವೇಕೆರೆ ಪಟ್ಟಣ ಪಂಚಾಯತಿ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‍ವಾರು ಕರಡು ಮತದಾರರ ಪಟ್ಟಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆ ಹಾಗೂ ತಹಸೀಲ್ದಾರರ ಕಛೇರಿಗಳಲ್ಲಿ ಡಿಸೆಂಬರ್ 10ರಂದು ಪ್ರಕಟಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.

      ಪಟ್ಟಿಗೆ ಸಂಬಂಧಿಸಿದಂತೆ ಮತದಾರರು ತಮ್ಮ ಹೆಸರು ವಾಸವಿರುವ ವಾರ್ಡಿನ ವ್ಯಾಪ್ತಿಯಲ್ಲಿ ಇರದೆ ಬೇರೆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ, ಗ್ರಾಮೀಣ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು.

      ಆಕ್ಷೇಪಣೆಗಳನ್ನು ಡಿಸೆಂಬರ್ 15ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗಧಿತ ಸಮಯದೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಡಿಸೆಂಬರ್ 20ರೊಳಗೆ ಇತ್ಯರ್ಥಪಡಿಸಿ, ಅಗತ್ಯವಿದ್ದಲ್ಲಿ ಸೂಕ್ತ ಬದಲಾವಣೆ ಮಾಡಿ ಡಿಸೆಂಬರ್ 26ರಂದು ಅಂತಿಮ ಮತದಾರರ ಪಟ್ಟಿಗಳನ್ನು ಆಯಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ತಹಸೀಲ್ದಾರರ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

(Visited 55 times, 1 visits today)

Related posts

Leave a Comment