ತುಮಕೂರು:

      ಉಪಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸಿದ್ದರಿಂದ ನಮ್ಮ ಅಭ್ಯರ್ಥಿಗಳ ಸೋಲಿಗೆ ಕಾರಣ ಎಂದು ಮಾಜಿ ಸಚಿವ ಎಸ್. ಶಿವಣ್ಣ ಆರೋಪಿಸಿದರು.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕಿತ್ತು. ಪಕ್ಷವನ್ನು ವಲಸಿಗರ ಕೈಗೆ ಗುತ್ತಿಗೆ ಕೊಡದೆ ಮೂಲ ಕಾರ್ಯಕರ್ತರಿಗೆ ಕೊಟ್ಟಿದ್ದರೆ ಇಂದು ಈ ಸ್ಥಿತಿ ಬರುತ್ತಿರಲಿಲ್ಲ. ಉಪ ಚುನಾವಣೆಯನ್ನು ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದಗೌಡ ಸೇರಿದಂತೆ ಹಲವರ ಸಲಹೆ ಜೊತೆಗೆ ಎಲ್ಲರನ್ನೂ ಒಗ್ಗೂಡಿಸಿ ಚುನಾವಣೆ ಎದುರಿಸಬೇಕಿತ್ತು. ವಲಸಿಗರಿಗೆ ಮಣೆ ಹಾಕದೆ ಮೂಲ ಬಿಜೆಪಿ ಕಾರ್ಯಕರ್ತರಿಗೆ ಪಕ್ಷದ ಟಿಕೆಟ್ ನೀಡಬೇಕಿತ್ತು ಎಂದು ಹೇಳಿದರು.

      ಉಪಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಸರಿಯಾಗಿ ಬಳಿಕೊಂಡಿಲ್ಲ ಎಂಬ ನೋವು ನನಗಿದೆ. ಬಿಜೆಪಿ ಮಾಜಿ ಉಪಾಧ್ಯಕ್ಷರಾದ ಭಾನುಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗೆ ಮುಂದುವರೆದರೆ ಮುಂದಿನ ಲೋಕಸಭಾ ಚುನಾವಣೆಗೆ ಹಿನ್ನಡೆಯಾಗಬಹುದು ಎಂದು ಎಚ್ಚರಿಸಿದರು.

      ನಮ್ಮ ಪಕ್ಷ ಕುಟುಂಬ ಪಕ್ಷವಲ್ಲ, ಕಾರ್ಯಕರ್ತರ ಪಕ್ಷ, ಕಾರ್ಯಕರ್ತರೇ ನಮ್ಮ ನಾಯಕರು, ಈ ಉಪಚುನಾವಣೆ ಸೋಲಿನಿಂದ ನಮ್ಮ ಮತದಾರರ ಶಕ್ತಿ ಕುಗ್ಗಿಲ್ಲ, ಶಕ್ತಿ ವಿರಾಟವಾಗಿದೆ. ಹಿಂದೂಗಳ ಪರ, ನಾಗರೀಕರ ಪರವಾಗಿರುವ ನಾವು ಚಾಮರಾಜನಗರದಿಂದ-ಬೀದರ್ ವರೆಗೂ 2011-12ರಲ್ಲಿ ಆನ್‍ಲೈನ್‍ನಲ್ಲಿ ಸುಮಾರು 1 ಕೋಟಿಗೂ ಮೀರಿ ಪಕ್ಷಕ್ಕೆ ಕಾರ್ಯಕರ್ತರು ನೊಂದಾಯಿ ಸಿಕೊಂಡಿದ್ದಾರೆ.

      ಕೋಲಾರದಿಂದ-ಕಾರವಾರದರೆಗೂ ಸುಮಾರು 60 ಸಾವಿರ ಬೂತ್‍ಗಳಿಗೆ 6 ಲಕ್ಷ ಜನರು ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಆದರೆ ಬಿಜೆಪಿ ಪಕ್ಷವನ್ನು ರಾಜ್ಯ ನಾಯಕರು ಸರದಾರ್‍ಗಳ ಕೈಗೆ ಕೊಡುವುದನ್ನು ಮೊದಲು ನಿಲ್ಲಿಸಿ, ಕಾರ್ಯಕರ್ತರ ಕೈಗೆ ಕೊಟ್ಟರೆ ಪಕ್ಷ ಸಂಘಟನೆ ಜೊತೆಗೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಂ.ಬಿ.ನಂದೀಶ್, ಜಯಸಿಂಹರಾವ್, ಕೆ.ಪಿ.ಮಹೇಶ್, ಶಾಂತರಾಜು, ಬನಶಂಕರಿಬಾಬು, ಕೆ.ಹರೀಶ್, ಊರುಕೆರೆ ನಂಜುಂಡಪ್ಪ, ನವೀನ್, ಮದನ್‍ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

 

(Visited 9 times, 1 visits today)