ಬೆಂಗಳೂರು:
ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಶನಿವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತು ಸಭೆ ನಡೆಯಿತು. ಸಚಿವ ಜಮೀರ್ ಅಹಮದ್ ಕೂಡ ಸಭೆಯಲ್ಲಿ ಪಾಲಗೊಂಡಿದ್ದರು, ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿ ಸಲ್ಲಿಸಲಾಯಿತು.
ನಿನ್ನೆಯಷ್ಟೇ ಕುಮಾರಸ್ವಾಮಿ ಟಿಪ್ಪು ಜಯಂತಿ ವಿಚಾರದ ಕುರಿತು ಮಾತನಾಡಿದ್ದು ಕಾಂಗ್ರೆಸ್ ಸರ್ಕಾರದಲ್ಲಿ ಆರಂಭಗೊಂಡು ಭಾರಿ ವಿವಾದ ಸೃಷ್ಠಿಸಿದ್ದ ಟಿಪ್ಪು ಜಯಂತಿಯನ್ನು ಕುಮಾರಸ್ವಾಮಿ ಸರ್ಕಾರ ಕೈಬಿಡುವುದಿಲ್ಲವೆಂದು ಮುಖ್ಯಮಂತ್ರಿ ಅವರೇ ಸ್ಪಷ್ಟಪಡಿಸಿದ್ದರು.
ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದಕ್ಕೆ ಒಪ್ಪಿಗೆ ಸೂಚಿಸಿದ ಬಳಿಕ ಟಿಪ್ಪು ಆಚರಣೆ ಒಂದು ರೂಪ ಪಡೆದುಕೊಳ್ಳಲಿದೆ.
(Visited 6 times, 1 visits today)
				
		
		
		
	
									 
					



