BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ
  • ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
  • ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
  • ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
  • ಶಂಕಿತ ನಕ್ಸಲ್ ವೆಂಕಟೇಶ್ ಬಂಧನ
  • ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ
  • ತುಮಕೂರು ಕ್ರಿಕೆಟ್ ಮೈದಾನದ ಅಂತಿಮ ವಿನ್ಯಾಸದ ವಿವರಣೆ
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪದ್ಮಶ್ರೀ ಸೂಲಗಿತ್ತಿ ನರಸಮ್ಮ ಸ್ಮರಣೀಯವಾಗಬೇಕು: ಮುರುಳೀಧರ ಹಾಲಪ್ಪ
ತುಮಕೂರು ಜಿಲ್ಲಾ ಸುದ್ಧಿಗಳು

ಪದ್ಮಶ್ರೀ ಸೂಲಗಿತ್ತಿ ನರಸಮ್ಮ ಸ್ಮರಣೀಯವಾಗಬೇಕು: ಮುರುಳೀಧರ ಹಾಲಪ್ಪ

By News Desk BenkiyabaleUpdated:January 10, 2019 4:44 pm

 ತುಮಕೂರು:

      ಸಾವಿರಾರು ಮಕ್ಕಳ ಜನನಕ್ಕೆ ಕಾರಣವಾಗಿರುವ ಮಹಾತಾಯಿ ಪದ್ಮಶ್ರೀ ಡಾ|| ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ನಗರದಲ್ಲಿನ ವೃತ್ತಕ್ಕೆ ಅವರ ಹೆಸರನ್ನು ನಾಮಕರಣ ಮಾಡುವಂತೆ ಜಿಲ್ಲಾಡಳಿತಕ್ಕೆ ಡಿಸಿಎಂ ಪರಮೇಶ್ವರ್ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ತಿಳಿಸಿದರು.

      ವಾರ್ಡ್.12 ಗಂಗಸಂದ್ರದಲ್ಲಿ ಡಾ.ಸೂಲಗಿತ್ತಿ ನರಸಮ್ಮ ಸ್ಮಾರಕ ಶಂಕುಸ್ಥಾಪನೆ ಹಾಗೂ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಸ್ತ್ರಚಿಕಿತ್ಸಾ ತಜ್ಞರಿಗಿಂತ, ಹೈಟೆಕ್ ಆಸ್ಪತ್ರೆಗಳ ಅತ್ಯಾಧುನಿಕ ಉಪಕರಣಗಳ ನೆರವಿಲ್ಲದೆ ಸಾವಿರಾರು ಹೆರಿಗೆಯನ್ನು ಯಶಸ್ವಿಯಾಗಿ ಮಾಡಿರುವ ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ವೃತ್ತ, ರಸ್ತೆ, ಪಾರ್ಕ್‍ಗೆ ನಾಮಕರಣ ಮಾಡುವಂತೆ ಈಗಾಗಲೇ ಉಪಮುಖ್ಯಮಂತ್ರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ಸೂಲಗಿತ್ತಿ ನರಸಮ್ಮ ಅವರ ಹೆಸರು ನಾಮಕರಣ ಮಾಡಲು ಶೀಘ್ರ ಕ್ರಮವಹಿಸಬೇಕಿದೆ ಎಂದು ಹೇಳಿದರು.

      ಸೂಲಗಿತ್ತಿ ನರಸಮ್ಮ ಅವರು ಈ ನಾಡಿನ ಆಸ್ತಿ, ಅವರು ಗರ್ಭೀಣಿಯರಿಗೆ ಆತ್ಮಸ್ಥೈರ್ಯವನ್ನು ತುಂಬುವ ಮೂಲಕ ಸುಸೂತ್ರವಾಗಿ ಹೆರಿಗೆ ಮಾಡಿಸುತ್ತಿದ್ದರು, ಸೂಲಗಿತ್ತಿ ನರಸಮ್ಮ ಅವರ ಸ್ಮಾರಕ ನಾಡಿಗೆ ಮಾದರಿ ಸ್ಮಾರಕವಾಗಿ ರೂಪುಗೊಳ್ಳುವುದರ ಜೊತೆಗೆ ಸೂಲಗಿತ್ತಿ ನರಸಮ್ಮ ಅವರ ಹೆಸರಿನಲ್ಲಿ ದತ್ತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವ ಮೂಲಕ ಅವರ ಹೆಸರನ್ನು ಅಜರಾಮರಗೊಳಿಸುವಂತಾಗಬೇಕೆಂದು ಆಶಿಸಿದರು.

      ಕನ್ನಡ ಪರ ಸಂಘಟನೆಗಳ ಮುಖಂಡ ಧನಿಯಾಕುಮಾರ್ ಮಾತನಾಡಿ, ಕುಗ್ರಾಮದಲ್ಲಿ ಹುಟ್ಟಿ ದೇಶವೇ ಮೆಚ್ಚುವಂತಹ ಕಾರ್ಯ ಮಾಡಿದ ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗಕ್ಕೆ ಇಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಚಿಂತನೆ ನಡೆಸಬೇಕಿದ್ದು, ಮೊಬೈಲ್‍ಗೆ ಜೋತುಬಿದ್ದಿರುವ ಯುವ ಸಮೂಹಕ್ಕೆ ನರಸಮ್ಮ ಅವರ ಸಾಧನೆಯನ್ನು ತಿಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ಸ್ಮಾರಕದಲ್ಲಿ ನಡೆಸಬೇಕಿದೆ, ರಸ್ತೆಗೆ ನರಸಮ್ಮ ಹೆಸರು ನಾಮಕರಣ ಹಾಗೂ ಪಾರ್ಕ್‍ನಲ್ಲಿ ಪ್ರತಿಮೆ ಸ್ಥಾಪಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಸದಸ್ಯರುಗಳು ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಿದರು.

      ಮಹಾನಗರ ಪಾಲಿಕೆ ಸದಸ್ಯೆ ಮಂಜುಳಾ ಆದರ್ಶ್ ಮಾತನಾಡಿ ಸೂಲಗಿತ್ತಿ ನರಸಮ್ಮಜ್ಜಿಯ ನೆನೆಪು ಮನೆ ಮಾತಾಗಿದ್ದು, ಅಜ್ಜಿಯ ಹೆಸರು ಸಾರ್ವಜನಿಕ ಸ್ಥಳಗಳಿಗೆ ಇಡುವ ವಿಚಾರವನ್ನು ಜ.30ರಂದು ನಡೆಯಲಿರುವ ಪ್ರಮಾಣ ವಚನ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.

      ಕಾರ್ಯಕ್ರಮದಲ್ಲಿ ಹಾಸನ ಜಿ.ಪಂ ಅಧ್ಯಕ್ಷೆ ಶ್ವೇತಾ ನಾಗರಾಜ್, ಸಾಹಿತಿಗಳಾದ ಅನ್ನಪೂರ್ಣ ವೆಂಕಟನಂಜಪ್ಪ, ಬಾ.ಹ.ರಮಾಕುಮಾರಿ, ಲಕ್ಷ್ಮಣ್ ದಾಸ್, ಸ್ವಾಧೀನ್ ಕುಮಾರ್, ಪಾಲಿಕೆ ಸದಸ್ಯೆ ದೀಪಾ ಮಹೇಶ್, ಬಳ್ಳಾರಿ ವೆಂಕಮ್ಮ ಲೇಖಕಿ, ಸೂಲಗಿತ್ತಿ ನರಸಮ್ಮ ರಾಜ್ಯ ಮಹಿಳೆ, ಮಕ್ಕಳು ಮತ್ತು ಅಂಗವಿಕಲರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷೆ ಎಸ್.ಶ್ರೀವಾಣಿ ವೆಂಕಟಾಚಲ ವಕೀಲರು, ನಾಗಾರ್ಜುನ ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ರಾಮಚಂದ್ರಪ್ಪ ಸೇರಿದಂತೆ ಇತರರು ಉಪಸ್ಥಿತ ರಿದ್ದರು.

 

(Visited 27 times, 1 visits today)
Previous Articleಬೀದಿಬದಿ ವ್ಯಾಪಾರಿಗಳ ತೆರವು: ಪ್ರತಿಭಟನೆ
Next Article ನಾದೋಪಾಸನ ತಂಡದಿಂದ ಕನ್ನಡ, ಹಿಂದಿ ಚಿತ್ರಗೀತೆಗಳ ರಸಮಂಜರಿ
News Desk Benkiyabale

Related Posts

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm news
ತಾಜಾ ಸುದ್ಧಿಗಳು
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm
news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm
news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
news

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
news

ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ

September 16, 2026 5:12 pm
Our Youtube Channel
Our Picks

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

By News Desk BenkiyabaleSeptember 16, 2026 5:32 pm

ತುಮಕೂರು: ಸರ್ಕಾರದಿಂದ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ…

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.