ಬೆಳಗಾವಿ:
ರಾಜ್ಯ ಸರ್ಕಾರವನ್ನು ಪತನದ ಅಂಚಿಗೆ ತಂದು ನಿಲ್ಲಿಸಿದ್ದ ವಿವಾದಿತ ಬೆಳಗಾವಿಯ ಪಿಎಲ್ಡಿ ಬ್ಯಾಂಕ್ನ ಅಧ್ಯಕ್ಷ ಚುನಾವಣೆ ವೇಳೆ ಉಭಯ ಬಣಗಳ ರಾಜಿ ಸಂಧಾನದ ಅಧ್ಯಕ್ಷ ರಾಗಿದ್ದ ಮಹದೇವ ಪಾಟೀಲ್ ಸೋಮವಾರ ನಿಧನರಾಗಿದ್ದಾರೆ.
ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣಾ ಕದನದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದಿಂದ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರು.
ಬೆಳಗಾವಿಯ ಫೂಲ್ಬಾಗ್ ಗಲ್ಲಿ ನಿವಾಸದಲ್ಲಿ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆ ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಣ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು.
ಅಷ್ಟೇ ಅಲ್ಲದೇ ಜೆಡಿಎಸ್ ಹಾಗೂ ಕ್ರಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ನಡುಗಿಸಿತ್ತು. ಆದ್ರೆ ಈಗ ಅಧ್ಯಕ್ಷ ಮಹಾದೇವ್ ಪಾಟೀಲ್ ಮೃತಪಟ್ಟಿರುವುದರಿಂದ ತೆರವಾದ ಸ್ಥಾನಕ್ಕೆ ಮತ್ತೆ ಚುನಾವಣೆ ನಡೆಯುವುದು ಅನಿವಾರ್ಯವಾಗಿದೆ.
(Visited 8 times, 1 visits today)