BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ತ್ಯಜಿಸಬೇಕು’ – ಪಾಲಿಕೆ ಮೇಯರ್
Trending

‘ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ತ್ಯಜಿಸಬೇಕು’ – ಪಾಲಿಕೆ ಮೇಯರ್

By News Desk BenkiyabaleUpdated:November 27, 2020 6:36 pm

ತುಮಕೂರು : 

      ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಹಾನಿಕರ. ಇದನ್ನು ಪ್ರತಿಯೊಬ್ಬರೂ ಅರಿತು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ತ್ಯಜಿಸಬೇಕು ಎಂದು ಮಹಾನಗರ ಪಾಲಿಕೆ ಮೇಯರ್ ಫರೀದಾ ಬೇಗಂ ಹೇಳಿದರು.

      ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಸಂಕಲ್ಪ ಫೌಂಡೇಶನ್ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹೋಟೆಲ್ ಆಹಾರ ವಿತರಣೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯಕ್ಕೆ ಹಾನಿಕರ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಹೋಟೆಲ್‍ನವರು, ಅಂಗಡಿಗಳ ವರ್ತಕರು ತಮ್ಮ ದಿನನಿತ್ಯ ವ್ಯಾಪಾರ ವಹಿವಾಟಿನಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದರು.

     ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ಹಾಕಲಾಗುತ್ತಿದ್ದರೂ ದಂಡ ಕಟ್ಟಿದ ತದ ನಂತರ ಮತ್ತೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಬಗ್ಗೆ ದೂರು ಬರುತ್ತಿವೆ. ಇದಕ್ಕೆ ಅವಕಾಶ ನೀಡದೆ ಹೋಟೆಲ್‍ನವರು, ವರ್ತಕರುಗಳು ಸ್ವಯಂ ಪ್ರೇರಿತರಾಗಿಯೇ ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಕೈಬಿಡಬೇಕು ಎಂದು ಸಲಹೆ ಮಾಡಿದರು.

      ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪ್ರತಿಯೊಬ್ಬರೂ ಅರಿವು ಮೂಡಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು.  ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳು ಜಾಸ್ತಿಯೇ ಇದೆ. ಹಾಗಾಗಿ ಹೋಟೆಲ್ ಮಾಲೀಕರು ಮಹಾನಗರ ಪಾಲಿಕೆ ಜತೆ ಕೈಜೋಡಿಸಿ ಪ್ಲಾಸ್ಟಿಕ್ ಮುಕ್ತ ತುಮಕೂರು ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

      ನಾಗರಿಕರು ಸಹ ತಾವಾಗಿಯೇ ಈ ಬಗ್ಗೆ ಅರಿತು ಪ್ಲಾಸ್ಟಿಕ್ ತ್ಯಜಿಸಿದರೆ ಮಾತ್ರ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಬಹುದಾಗಿದೆ ಎಂದರು.
ಪಾಲಿಕೆ ಆಯುಕ್ತ ರೇಣುಕಾ ಮಾತನಾಡಿ, ಹೋಟೆಲ್ ಅಸೋಸಿಯೇಷನ್ ಮೂಲಕವೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ ಎಂದರು.

     ಪಾಲಿಕೆ ಅಧಿಕಾರಿಗಳು ದಾಳಿ ಮಾಡಿ ದಂಡ ಹಾಕುವ ಹಂತಕ್ಕೆ ಪರಿಸ್ಥಿತಿಯನ್ನು ಹೋಟೆಲ್‍ಗಳವರು, ವರ್ತಕರು ತಂದುಕೊಳ್ಳಬಾರದು. ಸ್ವಯಂ ಪ್ರೇರಿತರಾಗಿಯೇ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಮುಂದಾಗಬೇಕು ಎಂದರು.

       ಕೆಲ ಹೋಟೆಲ್‍ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದರಿಂದ ಮನುಷ್ಯರಿಗೆ ಕ್ಯಾನ್ಸರ್ ರೋಗ ಬರಲು ಕಾರಣವಾಗುತ್ತಿದೆ. ಕೆಲ ಫುಟ್‍ಪಾತ್ ಹೋಟೆಲ್‍ಗಳಲ್ಲಿ ಹೆಚ್ಚು ಹೆಚ್ಚು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಮನುಷ್ಯನ ಆರೋಗ್ಯ ದೃಷ್ಠಿಯಿಂದ ಹಾಗೂ ಸ್ವಚ್ಚ ಪರಿಸರ ನಿರ್ಮಾಣಕ್ಕಾಗಿ ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು ಎಂದು ಅವರು ಹೇಳಿದರು. ಪ್ಲಾಸ್ಟಿಕ್‍ನಿಂದ ಮನುಷ್ಯನ ಆರೋಗ್ಯವನ್ನೇ ಹಾಳಾಗುತ್ತಿದೆ. ಬಿ.ಪಿ., ಶುಗರ್ ಇನ್ನಿತರೆ ಕಾಯಿಲೆಗಳಿಗೆ ಈ ಪ್ಲಾಸ್ಟಿಕ್ ಬಳಕೆ ಕಾರಣವಾಗುತ್ತಿದೆ ಎಂದರು. ಹೇಳಿದರು.

      ಹೋಟೆಲ್ ಅಸೋಸಿಯೇಷನ್‍ನವರು ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇಧವನ್ನು ಪಾಲಿಸಬೇಕು. ಜತೆಗೆ ಇತರೆ ಹೋಟೆಲ್‍ಗಳವರಿಗೂ ಈ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

     ಈ ಸಂದರ್ಭದಲ್ಲಿ ಪಾಲಿಕೆ ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ಜಿ.ಎಸ್. ಮಂಜುನಾಥ್, ಡಾ. ನವೀನ್, ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗೇಶ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

(Visited 16 times, 1 visits today)
Previous Articleರೈತ ವಿರೋಧಿ ಕಾಯ್ದೆಗಳನ್ನು ಕೈ ಬಿಡಲು ಆಗ್ರಹಿಸಿ ರೈತ ಸಂಘಟನೆಗಳ ಪ್ರತಿಭಟನೆ
Next Article ಮಧುಗಿರಿ : ಸುವರ್ಣಗ್ರಾಮ ಯೋಜನೆಯಡಿ 50 ಲಕ್ಷ ವೆಚ್ಚದಲ್ಲಿ ಕಾಮಗಾರಿ
News Desk Benkiyabale

Related Posts

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm news
ತಾಜಾ ಸುದ್ಧಿಗಳು
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm
news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
Our Youtube Channel
Our Picks

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

By News Desk BenkiyabaleSeptember 07, 2026 5:14 pm

ಕೊರಟಗೆರೆ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೆ ಕೊರಟಗೆರೆ ಪುರಸಭೆ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ-೨ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ…

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.