BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೈಭವದಿಂದ ನಡೆದ ಕಳಸೋತ್ಸವ
  • ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ
  • ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್
  • ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ
  • ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಫೆ.20ರಂದು ಜಿಲ್ಲಾಧಿಕಾರಿ ಹಾಗೂ ಎಸಿ, ತಹಶೀಲ್ದಾರರುಗಳ ಗ್ರಾಮ ವಾಸ್ತವ್ಯ
Trending

ಫೆ.20ರಂದು ಜಿಲ್ಲಾಧಿಕಾರಿ ಹಾಗೂ ಎಸಿ, ತಹಶೀಲ್ದಾರರುಗಳ ಗ್ರಾಮ ವಾಸ್ತವ್ಯ

By News Desk BenkiyabaleUpdated:February 16, 2021 7:38 pm

ತುಮಕೂರು  :

      ಕಂದಾಯ ಇಲಾಖೆಯ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಡಿ ಫೆಬ್ರವರಿ 20ರ 3ನೇ ಶನಿವಾರದಂದು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಲಕ್ಷ್ಮಿಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ ಅವರು ವಾಸ್ತವ್ಯ ಮಾಡಿ ಗ್ರಾಮದಲ್ಲಿನ ರೈತರ ಜಮೀನುಗಳ ಪಹಣಿ ಲೋಪದೋಷ, ಪಿಂಚಣಿ, ರೇಷನ್ ಕಾರ್ಡ್, ಮತ್ತಿತರ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲೆಯ ತಹಶೀಲ್ದಾರರುಗಳಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು, ಸರ್ಕಾರದ ಸುತ್ತೋಲೆಯನ್ವಯ ಮುಂಬರುವ ಫೆಬ್ರವರಿ 20ರಂದು ಹಾಗೂ ಪ್ರತಿ ತಿಂಗಳ 3ನೇ ಶನಿವಾರದಂದು ಕೈಗೊಳ್ಳಬೇಕಾಗಿರುವ ಗ್ರಾಮಭೇಟಿ ಹಾಗೂ ಹಳ್ಳಿ ವಾಸ್ತವ್ಯದ ಬಗ್ಗೆ ನಿರ್ದೇಶನ ನೀಡಿದರು.

       ಫೆಬ್ರವರಿ 20ರಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿರುವ ಜಿಲ್ಲಾಧಿಕಾರಿಗಳ ಗ್ರಾಮ ಭೇಟಿಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ, ಮಧುಗಿರಿ ತಾಲ್ಲೂಕಿನ ತಹಶೀಲ್ದಾರ್, ಕೃಷಿ, ತೋಟಗಾರಿಗೆ, ಆರೋಗ್ಯ, ಆಹಾರ, ಸಮಾಜ ಕಲ್ಯಾಣ, ಮತ್ತಿತರ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಆಯಾ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಹಾಗೂ ಮಾಹಿತಿ ನೀಡಲಿದ್ದಾರೆ.

      ಇದೇ ಮಾದರಿಯಲ್ಲಿ ಜಿಲ್ಲಾಧಿಕಾರಿಗಳು ಭೇಟಿ ನೀಡುವ ತಾಲ್ಲೂಕನ್ನು ಹೊರತುಪಡಿಸಿ ಅಂದೇ ಇತರೆ ತಾಲ್ಲೂಕುಗಳ ತಹಶೀಲ್ದಾರರುಗಳು ಹಾಗೂ ಉಪವಿಭಾಗಾಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಹಾಗೂ ಹಳ್ಳಿ ವಾಸ್ತವ್ಯ ಮಾಡಲಿದ್ದಾರೆ.
ಅದರಂತೆ ಫೆಬ್ರವರಿ 20ರಂದು ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಮುಗ್ಳೂರು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿಯ ಹಂದನಕೆರೆ ಗ್ರಾಮ, ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ ಬ್ಯಾತಗ್ರಾಮ, ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಹುಲಿಕುಂಟೆ, ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಹೋಬಳಿಯ ಸಿಂಗೋನಹಳ್ಳಿ, ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿ, ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಕೋಡ್ಲಹಳ್ಳಿ, ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ವಿಜ್ಞಸಂತೆ, ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಜಿ.ಹೊಸಹಳ್ಳಿಯಲ್ಲಿ ಸಂಬಂಧಪಟ್ಟ ತಾಲ್ಲೂಕುಗಳ ತಹಶೀಲ್ದಾರರುಗಳು ಗ್ರಾಮಗಳ ಭೇಟಿ ಮತ್ತು ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಗ್ರಾಮ ಭೇಟಿಯ ಸಂದರ್ಭದಲ್ಲಿ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ ನಂಬರ್ 3 ಮತ್ತು ಆಕಾರ್ ಬಂದ್ ತಾಳೆ ಹೊಂದಿರುವ ಬಗ್ಗೆ, ಕಾಲಂ ನಂ.3 ಮತ್ತು 9 ತಾಳೆ ಹೊಂದಿರುವ ಕುರಿತು, ಪೌತಿಖಾತೆ, ರೇಷನ್ ಕಾರ್ಡ್‍ಗೆ ಸಂಬಂಧಿಸಿದ ಸಮಸ್ಯೆಗಳು, ಮತದಾರರ ಪಟ್ಟಿ ಪರಿಷ್ಕರಣೆ, ಸ್ಮಶಾನ ಲಭ್ಯತೆ ಬಗ್ಗೆ ಪರಿಶೀಲನೆ, ಆಶ್ರಯ ಯೋಜನೆಯಡಿ ವಸತಿ ಕಲ್ಪಿಸುವುದು, ಸರ್ಕಾರಿ ಜಮೀನು ಒತ್ತುವರಿ ಬಗ್ಗೆ, ಆಧಾರ್ ಕಾರ್ಡ್‍ನ ಅನುಕೂಲತೆ, ಹದ್ದುಬಸ್ತು, ಪೋಡಿ, ದರಕಾಸ್ತು ಹಾಗೂ ಶಾಲೆ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾಕ್ರಮ ಇತ್ಯಾದಿ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದರು.
ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಬಹುದಾದ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಉಳಿದ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಗ್ರಾಮವಾಸ್ತವ್ಯ ಮಾಡುವ ಗ್ರಾಮದಲ್ಲಿ ಗ್ರಾಮದ ಜನರಿಗೆ ಆರೋಗ್ಯ ತಪಾಸಣೆಯನ್ನೂ ಕೂಡ ಮಾಡಲಾಗುವುದು ಎಂದು ಅವರು ತಿಳಿಸಿದರು.

      ಗ್ರಾಮವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಂಡಿರುವ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡುವ ಬಗ್ಗೆ ಹಾಗೂ ಅಂದಿನ ಕಾರ್ಯಕ್ರಮದ ಬಗ್ಗೆ ಜನರಿಗೆ ಮೊದಲೇ ಮಾಹಿತಿ ನೀಡಿ ಅರಿವು ಮೂಡಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಅಲ್ಲದೆ ವಾಸ್ತವ್ಯದ ಬಗ್ಗೆ ಆ ಭಾಗದ ಜನಪ್ರತಿನಿಧಿಗಳಿಗೂ ಮಾಹಿತಿ ನೀಡುವಂತೆ ತಿಳಿಸಿದರು.

      ಸಭೆಯಲ್ಲಿ ಉಪವಿಭಾಗಾಧಿಕಾರಿ ಅಜಯ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರಾಜಸುಲೋಚನಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಘು, ಡಿಹೆಚ್‍ಓ ಡಾ: ನಾಗೇಂದ್ರಪ್ಪ, ತಹಶೀಲ್ದಾರ್ ಮೋಹನ್ ಕುಮಾರ್, ಮತ್ತಿತರೆ ಅಧಿಕಾರಿಗಳು ಹಾಜರಿದ್ದರು.

(Visited 10 times, 1 visits today)
Previous Articleಅರಣ್ಯಾಧಿಕಾರಿಗಳಿಂದಲೇ ಅರಣ್ಯ ನಾಶ : ಗ್ರಾಪಂ ಸದಸ್ಯ ಆರೋಪ
Next Article “ಬಾಲಕಾರ್ಮಿಕ ಮುಕ್ತ ನಡೆ ತುಮಕೂರು ಕಡೆ” ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm
ಇತರೆ ಸುದ್ಧಿಗಳು

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm
ಇತರೆ ಸುದ್ಧಿಗಳು

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm
ಇತರೆ ಸುದ್ಧಿಗಳು

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
ಇತರೆ ಸುದ್ಧಿಗಳು

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
Our Youtube Channel
Our Picks

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

By News Desk BenkiyabaleFebruary 06, 2026 3:45 pm

ಹುಳಿಯಾರು: ಹುಳಿಯಾರಿನ ಗ್ರಾಮದೇವತೆ ಶ್ರೀ ಹುಳಿಯಾರಮ್ಮ ದೇವಿಯವರ ೧೩ ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮುಂಜಾನೆ ಏರ್ಪಡಿಸಿದ್ದ…

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.