BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ
  • ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ
  • ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು
  • ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ
  • ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ
  • ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಯಲು ಬಹಿರ್ದೆಸೆ ಮುಕ್ತ ರಾಜ್ಯ: 62ಲಕ್ಷ ಶೌಚಾಲಯ ನಿರ್ಮಾಣದ ಗುರಿ
ತುಮಕೂರು ಜಿಲ್ಲಾ ಸುದ್ಧಿಗಳು

ಬಯಲು ಬಹಿರ್ದೆಸೆ ಮುಕ್ತ ರಾಜ್ಯ: 62ಲಕ್ಷ ಶೌಚಾಲಯ ನಿರ್ಮಾಣದ ಗುರಿ

By News Desk BenkiyabaleUpdated:November 02, 2018 4:16 pm

 ತುಮಕೂರು:

      ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಒಟ್ಟು 65ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ 47ಲಕ್ಷ ಶೌಚಾಲಯ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಆಯುಕ್ತ ಡಾ: ವಿಶಾಲ್ ಆರ್. ತಿಳಿಸಿದರು.

      ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ನಗರದ ಬಿರ್ಲಾ ಆಡಿಟೋರಿಯಂನಲ್ಲಿಂದು ಸ್ವಚ್ಛಭಾರತ ಮಿಷನ್ ಯೋಜನೆಯಡಿ ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕುರಿತು ಅರಿವು ಮೂಡಿಸುವ ಸಲುವಾಗಿ ಜನಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 65ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿಯನ್ನು ಮರು ಪರಿಶೀಲಿಸಿ ಅಂತಿಮವಾಗಿ 47ಲಕ್ಷ ಶೌಚಾಲಯಗಳ ನಿರ್ಮಾಣಕ್ಕೆ ಮಾತ್ರ ಇಲಾಖೆಯಿಂದ ಮಂಜೂರಾತಿ ನೀಡಲಾಗಿದೆ. ಇದರಲ್ಲಿ 10ಲಕ್ಷ ಶೌಚಾಲಯಗಳನ್ನು ವಿವಿಧ ಯೋಜನೆಗಳಡಿ ನಿರ್ಮಾಣ ಮಾಡಲಾಗಿದೆ. ಉಳಿದ 37ಲಕ್ಷ ಶೌಚಾಲಯಗಳ ಪೈಕಿ 70ಸಾವಿರ ಶೌಚಾಲಯ ನಿರ್ಮಾಣ ಮಾತ್ರ ಬಾಕಿ ಉಳಿದಿದ್ದು, ಕೂಡಲೇ ಇದನ್ನು ಪೂರ್ಣಗೊಳಿಸಿ ಬಯಲು ಬಹಿರ್ದೆಸೆ ಮುಕ್ತ ರಾಜ್ಯ ಘೋಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

      ಶೌಚಾಲಯಗಳನ್ನು ನಿರ್ಮಾಣ ಮಾಡಿದರಷ್ಟೆ ಸಾಲದು. ಜನಬಳಕೆಯಾದಾಗ ಮಾತ್ರ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮ ಯಶಸ್ಸು ಕಾಣಲಿದೆ. ಸಾರ್ವಜನಿಕರಿಗೆ ಶೌಚಾಲಯವನ್ನು ಕಡ್ಡಾಯವಾಗಿ ಬಳಸುವ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿಗಾಗಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಮಲ-ಮೂತ್ರವನ್ನು ವೈಜ್ಞಾನಿಕ ರೀತಿಯಲ್ಲಿ ಸುರಕ್ಷಿತವಾಗಿ ವಿಲೇವಾರಿಯಾದಾಗ ಮಾತ್ರ ಬಹಿರ್ದೆಸೆ ಮುಕ್ತ ರಾಜ್ಯವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಚುನಾಯಿತ ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿರುವ ಜನ ಸಾಮಾನ್ಯರಿಗೆ ಅರಿವು ಮೂಡಿಸಬೇಕು. ಮಾಧ್ಯಮದವರನ್ನೊಳಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸಲು 150ಕೋಟಿ ರೂ.ವೆಚ್ಚದಲ್ಲಿ ರಾಜ್ಯ ಮಟ್ಟದ ಐಇಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

      ಬಯಲು ಬಹಿರ್ದೆಸೆ ಕುರಿತು ಜನರಲ್ಲಿ ಅರಿವು ಮೂಡದ ಹೊರತು ಘನ ಹಾಗೂ ದ್ರವ ತ್ಯಾಜ್ಯ ಸಮರ್ಪಕ ನಿರ್ವಹಣೆ ಸಾಧ್ಯವಿಲ್ಲ. ಶೌಚಾಲಯ ಕಟ್ಟಿರುವ ಕಡೆ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಬಹುಗ್ರಾಮ ಯೋಜನೆಯಡಿ ಮನೆ-ಮನೆಗೂ ನೀರಿನ ಸಂಪರ್ಕ ವ್ಯವಸ್ಥೆ ಮಾಡುವ ಬಗ್ಗೆ ಯೋಜಿಸಲಾಗಿದೆ. ವೈಯಕ್ತಿಕ ಶೌಚಾಲಯಗಳಲ್ಲದೆ ಶಾಲೆ ಹಾಗೂ ಅಂಗನವಾಡಿಗಳಲ್ಲಿರುವ ಶೌಚಾಲಯಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು 34 ಕೋಟಿ ರೂ.ಗಳನ್ನು ಮೀಸಡಲಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನೀರಿನ ವ್ಯವಸ್ಥೆಯಿಲ್ಲದ ಅಂಗನವಾಡಿ ಹಾಗೂ ಶಾಲೆಗಳ ವಿವರವನ್ನು ಒದಗಿಸಿದಲ್ಲಿ ಆದ್ಯತೆ ಮೇಲೆ ಹಣ ಮಂಜೂರು ಮಾಡಲಾಗುವುದು. ಶಾಲೆ ಹಾಗೂ ಅಂಗನವಾಡಿಗಳಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಿಕೊಳ್ಳಲು 15 ಸಾವಿರ ರೂ. ಹಾಗೂ ಹಳೆ ಶೌಚಾಲಯ ದುರಸ್ತಿಗಾಗಿ 12ಸಾವರಿ ರೂ.ಗಳನ್ನು ಒದಗಿಸಲಾಗುವುದು. ಗ್ರಾಮ ಪಂಚಾಯತಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

      ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪ್ರಾಸ್ತಾವಿಕವಾಗಿ ಮಾತನಾಡಿ, 2012ರ ಬೇಸ್ ಲೈನ್ ಸರ್ವೆ ಪ್ರಕಾರ ಜಿಲ್ಲೆಯಲ್ಲಿ 413933 ಕುಟುಂಬಗಳಿದ್ದು, 120676 ಕುಟುಂಬಗಳು ಮಾತ್ರ ಶೌಚಾಲಯಗಳನ್ನು ಹೊಂದಿದ್ದರು. ಉಳಿದ 293257 ಕುಟುಂಬಗಳಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡುವ ಮೂಲಕ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲಾಗಿದೆ. ಇದಕ್ಕಾಗಿ ಹಗಲಿರುಳು ಶ್ರಮಿಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದಿಸಿದ ಅವರು, ಸಾರ್ವಜನಿಕರು ಆರೋಗ್ಯ ಹಾಗೂ ಶುಚಿತ್ವದ ಹಿತದೃಷ್ಟಿಯಿಂದ ಕಟ್ಟಿರುವ ಶೌಚಾಲಯಗಳನ್ನು ಸ್ವಇಚ್ಛೆಯಿಂದ ಸದ್ಬಳಕೆ ಮಾಡಿಕೊಳ್ಳಬೇಕು. ಸಮರ್ಪಕವಾಗಿ ಶೌಚಾಲಯಗಳು ಬಳಕೆಯಾಗದಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿರುವುದು ನೋವಿನ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಶೌಚಾಲಯ ಬಳಕೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು “ಬಳಕೆ ಅಭಿಯಾನ”ವನ್ನು ಹಮ್ಮಿಕೊಳ್ಳಲಾಗುವುದು ಎಂದರು.

      ಬೇಸ್ ಲೈನ್ ಸಮೀಕ್ಷೆಯಲ್ಲಿ ಬಿಟ್ಟು ಹೋದ ಕುಟುಂಬಗಳನ್ನು ಶೌಚಾಲಯ ನಿರ್ಮಾಣಕ್ಕೆ ಹಣ ಒದಗಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಇದಲ್ಲದೆ ಜಿಲ್ಲೆಯಲ್ಲಿ ಗುರುತಿಸಲಾದ ಶೌಚಾಲಯಗಳಿಲ್ಲದ 474 ಅಂಗನವಾಡಿಗಳ ಪೈಕಿ 270 ಅಂಗನವಾಡಿಗಳಲ್ಲಿ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ 2 ತಿಂಗಳಲ್ಲಿ ಉಳಿದ ಅಂಗನವಾಡಿಗಳಲ್ಲಿ ಶೌಚಾಲಯಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಹಾಗೂ ಶೌಚಾಲಯಗಳಿಲ್ಲದ ಶಾಲೆಗಳಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

      ಜಿ.ಪಂ. ಅಧ್ಯಕ್ಷೆ ಲತಾ ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿರುವ 2582 ಗ್ರಾಮಗಳಲ್ಲಿ ಶೇ.100ರಷ್ಟು ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಗ್ರಾಮೀಣ ಪ್ರದೇಶದವರು ಶೌಚಾಲಯವನ್ನು ಸಮರ್ಪಕವಾಗಿ ಬಳಸಬೇಕು. ಅಂಗನವಾಡಿ, ಅಂಗಡಿ, ಕಲ್ಯಾಣ ಮಂದಿರ, ಬಸ್‍ನಿಲ್ದಾಣಗಳಲ್ಲಿ ಸಂಗ್ರಹವಾಗುವ ಘನ-ದ್ರವ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವ ಮೂಲಕ ಪ್ರತಿ ಗ್ರಾಮವನ್ನು ಸ್ವಚ್ಛ ಗ್ರಾಮವನ್ನಾಗಿ ಮಾಡಬೇಕಲ್ಲದೆ ಸಾರ್ವಜನಿಕ ಸ್ಥಳಗಳನ್ನು ಕಸ ಮುಕ್ತಗೊಳಿಸುವ ಮೂಲಕ ನೈರ್ಮಲ್ಯತೆ ಕಾಪಾಡಿಕೊಳ್ಳಬೇಕೆಂದರು ಮನವಿ ಮಾಡಿದರು.

      ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಮಾತನಾಡಿ, ಜಿಲ್ಲೆಯು ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತವೆಂದು ಘೋಷಣೆಯಾಗಿರುವ ಸಾಧನೆಯ ಹಿಂದೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಶ್ರಮ ಅಭಿನಂದನಾರ್ಹ. ತಾಲ್ಲೂಕು ಸಂಯೋಜಕರು, ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಗುರಿ ಹಾಗೂ ದಿನಾಂಕ ನಿಗಧಿಪಡಿಸಿ ಒತ್ತಡ ಹೇರಿ ಜವಾಬ್ದಾರಿ ವಹಿಸಿದ್ದರಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳು ಈ ಸಾಧನೆ ಸಾಕಾರಕ್ಕೆ ಕೈಜೋಡಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯಗಳನ್ನು ಕುರಿ-ಕೋಳಿಗಳನ್ನು ಕೂಡಿ ಹಾಕಲು ಬಳಸುತ್ತಿರುವುದ ಕಂಡುಬಂದಿದ್ದು, ಶೌಚಾಲಯಗಳನ್ನು ಬಹಿರ್ದೆಸೆಗಾಗಿ ಮಾತ್ರ ಬಳಸುವಂತೆ ಜನರಲ್ಲಿ ಮನವರಿಕೆ ಮಾಡಿಸಬೇಕಿದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ತಿಮ್ಮಯ್ಯ, ರಾಮಾಂಜಿನೇಯ, ಕೆಂಚಮಾರಯ್ಯ, ಯಶೋಧಮ್ಮ, ತುಮಕೂರು ತಾಲೂಕು ಪಂಚಾಯತಿ ಅಧ್ಯಕ್ಷ ಗಂಗಾಂಜನೇಯ, ಮುಖ್ಯ ಯೋಜನಾಧಿಕಾರಿ ಬಾಲರಾಜು, ವಿವಿಧ ಗ್ರಾಮ ಪಂಚಾಯತಿ ಅಧ್ಯಕ್ಷ/ಉಪಾಧ್ಯಕ್ಷರು, ಸದಸ್ಯರು, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

 

(Visited 39 times, 1 visits today)
Previous Articleಕನ್ನಡಿಗರೆಲ್ಲರೂ ಒಟ್ಟಾದರೆ ಮಾತ್ರ ಇಡೀ ಕರ್ನಾಟಕ ಉಳಿಯುತ್ತದೆ
Next Article ಪ್ರೀತಿಸಿದ್ದ ಅಪ್ರಾಪ್ತ ಪ್ರೇಮಿಗಳಿಬ್ಬರು ನೇಣಿಗೆ ಶರಣು?
News Desk Benkiyabale

Related Posts

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm news

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm news

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm news
ತಾಜಾ ಸುದ್ಧಿಗಳು

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm
news

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm
news

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm
news

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
news

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm
news

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm
Our Youtube Channel
Our Picks

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

By News Desk BenkiyabaleOctober 10, 2026 6:10 pm

ತುರುವೇಕೆರೆ: ತಾಲೂಕಿನ ಕೋಳಘಟ್ಟ ಗ್ರಾಮದ ಮಂಜುನಾಥ ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಕ್ರಷರ್ ಮಾಲೀಕ ರಾಜೂಗೌಡ ಕೈ ಕಟ್ಟಿ ಮಾರಾಂತಿಕ ಹಲ್ಲೆ…

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.