ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ 5 ಲಕ್ಷ ಪರಿಹಾರಕ್ಕೆ ಪರಮೇಶ್ವರ್ ಒತ್ತಾಯ!

ಕೊರಟಗೆರೆ :

      ಕೊರಟಗೆರೆ ಪಟ್ಟಣದ ಸಮೀಪ ಜಟ್ಟಿ ಅಗ್ರಹಾರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಪಟ್ಟವರಿಗೆ ಸರಕಾರ 5 ಲಕ್ಷ ರೂ.ಪರಿಹಾರ ಮೊತ್ತ ಘೋಷಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಒತ್ತಾಯಿಸಿದರು.

      ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಪಘಾತದಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಧುಗಿರಿಯಿಂದ ತುಮಕೂರಿಗೆ ಹೊರಟ ಬಸ್ ಮಾರ್ಗ ಮಧ್ಯೆ ಜಟ್ಟಿ ಅಗ್ರಹಾರದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿದ್ದು, 5 ಜನ ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಕ್ಕೆ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಲಿ ಎಂದರು.

      ಜೊತೆಗೆ, ಈ ಮಾರ್ಗದಲ್ಲಿ ಇದು ಎರಡನೇ ಅಪಘಾತವಾಗಿದೆ. ಬಸ್‍ಗಳ ವೇಗಕ್ಕೆ ಕಡಿವಾಣ ಹಾಕಬೇಕಿದೆ. ಈ ನಿಟ್ಟಿನಲ್ಲಿ ಆರ್‍ಟಿಒ ಹಾಗೂ ಪೆÇಲೀಸ್ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆರ್‍ಟಿಒ ಅವರು ಖಾಸಗಿ ಬಸ್ ಮಾಲೀಕರ ಜೊತೆ ಶಾಮೀಲಾಗಿದ್ದರೆ ಕೂಡಲೇ ಡಿಸಿ ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ ಅವರು ಈ ಸಂಬಂಧ ಸಾರಿಗೆ ಸಚಿವರೊಂದಿಗೆ ಮಾತನಾಡುವೆ ಎಂದರು.

(Visited 61 times, 1 visits today)

Related posts

Leave a Comment