ಭದ್ರತಾ ಪಡೆಗಳ ಬೇಟೆಗೆ ಇಬ್ಬರು ಭಯೋತ್ಪಾದಕರು ಬಲಿ

ಶ್ರೀನಗರ:

       ತಡ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಹಿಝ್‌ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಶನಿವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಗೆ ಬಲಿಯಾಗಿದ್ದಾರೆ. 

      ಖುಡ್ಪೋರಾದಲ್ಲಿ ಭಯೋತ್ಪಾದಕರು ಅಡಗಿದ್ದಾರೆಂದು ದೊರೆತ ವರ್ತಮಾನದ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿತ್ತು.

      ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಆಗ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾದಕರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಇಬ್ಬರು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ. ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳನ್ನು ಗುರಿಯಗಿಸಿ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರು ತನ್ನ ಸಾವನ್ನು ತಾವೇ ತಂದುಕೊಂಡಿದ್ದಾರೆ.

      ಮೃತಪಟ್ಟವರನ್ನು ಮುಹಮ್ಮದ್ ಇರ್ಫಾನ್ ಬಟ್ ಮತ್ತು ಶಾಹೀದ್ ಮಿರ್ ಎಂದು ತಿಳಿದು ಬಂದಿದೆ. ಇವರು ಕಳೆದ ವರ್ಷ ಉಗ್ರ ಸಂಘನೆಗೆ ಸೇರಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಮತ್ತಿಬ್ಬರು ಭಯೋತ್ಪಾದಕರು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.

 

 
(Visited 7 times, 1 visits today)

Related posts

Leave a Comment