ಮತದಾರರ ಪಟ್ಟಿ ಪರಿಷ್ಕರಣೆ: ನಗರದಲ್ಲಿ ನಾಳೆಯಿಂದ ವಿಶೇಷ ನೋಂದಣಿ

 ತುಮಕೂರು :

      ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019ಕ್ಕೆ ಸಂಬಂಧಿಸಿದಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 23 ರಿಂದ 25ರವರೆಗೆ 3 ದಿನಗಳ ಕಾಲ “ವಿಶೇಷ ನೋಂದಣಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಈ ಕಾರ್ಯಕ್ರಮದಡಿ ನವೆಂಬರ್ 23 ರಿಂದ 25ರವರೆಗಿನ ಎಲ್ಲಾ ದಿನಗಳಂದು ಅರ್ಹ ಮತದಾರರು ಭರ್ತಿ ಮಾಡಿದ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಭಾವಚಿತ್ರವುಳ್ಳ ಮತದಾರರ ಪಟ್ಟಿಯ ತಯಾರಿಕೆಗೆ ಸಹಕರಿಸಬೇಕು. ತುಮಕೂರು ನಗರದ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

(Visited 7 times, 1 visits today)

Related posts

Leave a Comment