BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ
  • ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ
  • ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ
  • 5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು
  • ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ
  • ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ
  • ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್
  • ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮನ ಸೆಳೆದ ಗಾಂಧೀಜಿ ವಿಶೇಷ ಛಾಯಾಚಿತ್ರ ಪ್ರದರ್ಶನ
Trending

ಮನ ಸೆಳೆದ ಗಾಂಧೀಜಿ ವಿಶೇಷ ಛಾಯಾಚಿತ್ರ ಪ್ರದರ್ಶನ

By News Desk BenkiyabaleUpdated:November 29, 2019 7:17 pm

ತುಮಕೂರು :

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ವತಿಯಿಂದ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ತಿಪಟೂರಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿಂದು ಗಾಂಧೀಜಿಯವರ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತಿಪಟೂರು ತಾಲ್ಲೂಕು ಪಂಚಾಯತಿ ಸದಸ್ಯ ಜಿ.ಎಸ್. ಶಿವಸ್ವಾಮಿ ಅವರು ಚಾಲನೆ ನೀಡಿದರು.

      ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿವೆ. ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸುವ ಮೂಲಕ ಗಾಂಧೀಜಿಯವರ ಸ್ಮರಣೆ ಮಾಡಿಕೊಳ್ಳಬಹುದು ಎಂದರು.

      ಗಾಂಧೀಜಿ ಅವರ ಜೀವನ ಸಾಧನೆಗಳ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಎಲ್ಲರಿಗೂ ಇದೊಂದು ಸದಾವಕಾಶವಾಗಿದೆ. ಸತ್ಯ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟ ಹಾಗೂ ಅಪಾರ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ತೋರಿಸಿದ ಮಹಾತ್ಮ ಗಾಂಧೀಜಿ ಅವರ ಸ್ಮರಣೆ ಸದಾಕಾಲವೂ ನಮಗೆಲ್ಲ ಪ್ರೇರಣೆದಾಯಕವಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಸದಸ್ಯ ರವಿಕುಮಾರ್, ಬಸ್ ನಿಲ್ದಾಣಾಧಿಕಾರಿ ರಂಗಸ್ವಾಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ. ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. ಪ್ರದರ್ಶನವು ಇಂದಿನಿಂದ ಡಿಸೆಂಬರ್ 1ರವರೆಗೆ ನಡೆಯಲಿದೆ.

      ಪ್ರದರ್ಶನಕ್ಕೆ ಮೆಚ್ಚುಗೆ:- ಸ್ವಾತಂತ್ರ್ಯ ಸಂಗ್ರಾಮದ ಕಾಲಘಟ್ಟಗಳಲ್ಲಿ ಮಹಾತ್ಮಾ ಗಾಂಧೀಜಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ ಪ್ರದೇಶಗಳು, ಅಸ್ಪøಶತೆ ನಿವಾರಣೆಗಾಗಿ ಗಾಂಧೀಜಿ ನಡೆಸಿದ ಆಂದೋಲನ, 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೇಸ್ ಅಧಿವೇಶನ ಸೇರಿದಂತೆ ಅವರ ಜೀವನ ಚರಿತ್ರೆಯ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು. ಈ ವಿಶೇಷ ಛಾಯಾಚಿತ್ರ ಪ್ರದರ್ಶನ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ ಕೆಲ ವಿದ್ಯಾರ್ಥಿಗಳು ಛಾಯಾಚಿತ್ರ ಪ್ರದರ್ಶನವು ಗಾಂಧೀಜಿಯವರ ಜೀವನದ ಕೆಲವು ಮಹತ್ವದ ಕಾಲಘಟ್ಟವನ್ನು ಅರಿತುಕೊಳ್ಳಲು ಸಹಕಾರಿಯಾಯಿತು ಎಂದರು.

(Visited 13 times, 1 visits today)
Previous Articleಡಿ.1 ಗೂಳೂರು ಗಣಪತಿ ವಿಸರ್ಜನಾ ಮಹೋತ್ಸವ!
Next Article ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ : ದೂರು
News Desk Benkiyabale

Related Posts

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm news

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm news

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm news
ತಾಜಾ ಸುದ್ಧಿಗಳು
news

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm
news

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm
news

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm
news

5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು

October 24, 2026 6:10 pm
news

ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ

October 24, 2026 5:33 pm
news

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm
Our Youtube Channel
Our Picks

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm

5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು

October 24, 2026 6:10 pm

ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ

October 24, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

By News Desk BenkiyabaleOctober 24, 2026 6:32 pm

ತುಮಕೂರು: ವಿಶ್ವ ಪೋಲಿಯೊ ದಿನದ ಅಂಗವಾಗಿ ನಗರದ ವಿವಿಧ ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳು ಶನಿವಾರ ನಗರದಲ್ಲಿ ಪಲ್ಸ್ ಪೋಲಿಯೊ…

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm

5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು

October 24, 2026 6:10 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.