ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಶಾಸಕ ಸಿ.ಟಿ.ರವಿ ಭಿಕ್ಷಾಟನೆ

ಚಿಕ್ಕಮಗಳೂರು:

      ನಮಗೆ ಸ್ವಾರ್ಥರಹಿತ ರಾಜಕಾರಣದ ಅವಶ್ಯಕತೆ ಇದೆ. ಹೀಗಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ನಾವು ಹರಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.

      ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರಿಂದಲೇ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ಸಿಕ್ಕಿದೆ. ಹೀಗಾಗಿ ಅವರು ಮತ್ತೊಮ್ಮೆ ಪ್ರಧಾನಿಯಾಗಲೆಂದು ದತ್ತಾತ್ರೇಯಸ್ವಾಮಿಗೆ ಹರಕೆ ಮಾಡಿಕೊಂಡಿದ್ದೇವೆ. ನಾವು ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕಾಗಿದೆ ಎಂದರು.

 

      ಡಿ. 13ರಂದು ನಡೆಯಲಿರುವ ದತ್ತಜಯಂತಿ ಹಿನ್ನಲೆ ಇರುಮುಡಿ ರೂಪದಲ್ಲಿ ದತ್ತಪೀಠಕ್ಕೆ ತೆರಳಲು ದತ್ತ ಭಕ್ತರು ಸಿದ್ಧತೆ ನಡೆಸುತ್ತಿದ್ದಾರೆ.

      ದತ್ತ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಪಡಿ ಸಂಗ್ರಹ ಮಾಡಲಾಯಿತು. ದತ್ತಮಾಲಾಧಾರಿಯಾಗಿರುವ ಶಾಸಕ ಸಿ.ಟಿ.ರವಿ ಹಾಗೂ ಮಾಲಾಧಾರಿಗಳಿಂದ ಪಡಿ ಸಂಗ್ರಹ ನಡೆಯಿತು. ಬಸನಹಳ್ಳಿ ಮುಖ್ಯ ರಸ್ತೆ, ರಾಘವೇಂದ್ರ ಮಠದ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿಸಲಾಯಿತು.

(Visited 20 times, 1 visits today)

Related posts

Leave a Comment