ತುಮಕೂರು


ಜಿಲ್ಲೆಯಲ್ಲಿ ಇಂದಿನಿAದ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊAಡ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ೫ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ ಸೇರಿದಂತೆ ೪ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಟಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ೫ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಬೆಂಗಳೂರಿನಲ್ಲಿAದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.
ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಅರ್ಹ ಫಲಾನುಭವಿಗಳಿಗೆ ಮಾಹೆಯಾನ ೩,೦೦೦ ರೂ. ಹಾಗೂ ಡಿಪ್ಲೋಮಾ ಹೊಂದಿದವರಿಗೆ ೧,೫೦೦ ರೂ.ಗಳನ್ನು ಅವರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆಯನ್ನು ಜಮೆ ಮಾಡಲಾಗುವುದು. ೨೦೨೩ರಲ್ಲಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಟ ೬ ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದ ನಿರುದ್ಯೋಗಿಗಳು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಅಂಕಿ-ಅAಶಗಳ ಪ್ರಕಾರ ಜಿಲ್ಲೆಯಲ್ಲಿ ಸುಮಾರು ೧೦,೦೦೦ ಪದವೀಧರರು ಹಾಗೂ ೨,೦೦೦ ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿದ್ದಾರೆಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಸ್ಪಂದಿಸಿದ ಸಚಿವರು, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಎಲ್ಲಾ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬರುವ ೨೦೨೪ರ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಆಯ-ವ್ಯಯ ಮಂಡನೆಯಾಗುವ ನಿರೀಕ್ಷೆಯಿದ್ದು, ಆಯ-ವ್ಯಯದ ನಂತರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತುಮಕೂರು ತಾಲ್ಲೂಕು ದುರ್ಗದಹಳ್ಳಿಯಲ್ಲಿ ಸ್ಮಶಾನವಿಲ್ಲದೆ ರಸ್ತೆ ಪಕ್ಕದಲ್ಲಿ ಶವ ಸಂಸ್ಕಾರ ಮಾಡಿರುವ ಬಗ್ಗೆ ಮಾತನಾಡಿದ ಸಚಿವರು, ಸಂಬAಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದು, ಪ್ರಕರಣವನ್ನು ಬಗೆಹರಿಸದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕ್ರಮವಹಿಸಲಾಗುವುದು. ದಲಿತ ಸಮುದಾಯಗಳಿಗೆ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ತೊಂದರೆ ಅನುಭವಿಸುತ್ತಿರುವುದನ್ನು ತಡೆಯಲು ೨೦೧೩ರಲ್ಲಿಯೇ ನಮ್ಮ ಸರ್ಕಾರ ರಾಜ್ಯದ ಪ್ರತಿ ಗ್ರಾಮದಲ್ಲಿಯೂ ಸಾರ್ವಜನಿಕ ಸ್ಮಶಾನಕ್ಕಾಗಿ ಭೂಮಿ ಮೀಸಲಿಡಬೇಕೆಂಬ ನಿಯಮ ಜಾರಿಗೆ ತಂದಿತ್ತು. ಈಗಲೂ ಈ ನಿಯಮ ಮುಂದುವರೆದುಕೊAಡು ಹೋಗುತ್ತಿದ್ದು, ಪ್ರತಿ ಗ್ರಾಮದಲ್ಲಿಯೂ ಸ್ಮಶಾನ ಭೂಮಿ ಮೀಸಲಿಡುವ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಅಗತ್ಯವಿರುವೆಡೆ ವಿದ್ಯುತ್ ಚಿತಾಗಾರ ನಿರ್ಮಿಸುವ ಬಗ್ಗೆಯೂ ಚಿಂತಸಲಾಗುತ್ತಿದೆ ಎಂದು ತಿಳಿಸಿದರು.
ತುಮಕೂರು ನಗರ ವೇಗವಾಗಿ ಬೆಳೆಯುತ್ತಿರುವುದರಿಂದ ಯೋಜಿತ ರೀತಿಯಲ್ಲಿ ಚರಂಡಿ, ಒಳಚರಂಡಿ, ರಸ್ತೆ ಸಂಪರ್ಕ ವ್ಯವಸ್ಥೆಯೊಂದಿಗೆ ಪಾಲಿಕೆ ವ್ಯಾಪ್ತಿಯನ್ನು ವಿಸ್ತರಿಸುವ ಹಾಗೂ ವಾರ್ಡುಗಳ ಪುನರ್ವಿಂಗಡಣೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ಸಂಬAಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 1 times, 1 visits today)