ರಾಕೇಶ್ ಸಿಂಗ್ ಅವರಿಗೆ ಅಧಿಕಾರಿಗಳಿಂದ ಮಾಹಿತಿ!!

ತುಮಕೂರು :

      ಎತ್ತಿನಹೊಳೆ ಯೋಜನೆ ಹಾಗೂ ಹೇಮಾವತಿ ನಾಲೆಯ ಕುರಿತು ಜಿಲ್ಲೆಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಮಾಹಿತಿ ಪಡೆದರು.

     ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಮಧ್ಯಾಹ್ನ ಎತ್ತಿನಹೊಳೆ ಹಾಗೂ ಹೇಮಾವತಿಯ ವಿಶೇಷ ಭೂಸ್ವಾದೀನ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯಲ್ಲಿ ಎತ್ತಿನಹೊಳೆಗೆ ಅಗತ್ಯವಿರುವ ಜಮೀನು ಭೂಸ್ವಾದೀನಕ್ಕಾಗಿ ಅಗತ್ಯವಿರುವ ಹಣ ಹಾಗೂ ಬೈರಗೊಂಡ್ಲು ಜಲಾಶಯದ ಕುರಿತು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಹಾಗೂ ಭೂಸ್ವಾಧೀನಾಧಿಕಾರಿಯೊಂದಿಗೆ ಚರ್ಚಿಸಿದರು.

      ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬಿಕ್ಕೆಗುಡ್ಡ-ಹಾಗಲವಾಡಿಯಲ್ಲಿ ಹೇಮಾವತಿ ನಾಲೆಯ ನಿರ್ಮಾಣಕ್ಕೆ ರೈತರು ನೇರವಾಗಿ ಜಮೀನು ನೀಡಲು ಮುಂದೆ ಬರುತ್ತಿದ್ದಾರೆ ಎಂದು ಹೇಮಾವತಿಯ ವಿಶೇಷ ಭೂಸ್ವಾಧೀನಾಧಿಕಾರಿ ಯಶೋಧ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ತಿಳಿಸಿದರು. ಸಭೆಯಲ್ಲಿ ಎತ್ತಿನ ಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಜಿ.ಡಿ. ಶೇಖರ್, ಎತ್ತಿನ ಹೊಳೆಯ ಸಹಾಯಕ ಕಾರ್ಯಕಾರಿ ಇಂಜಿನಿಯರ್ ಕಲ್ಬುರ್ಗಿ ಮತ್ತಿತರರು ಹಾಜರಿದ್ದರು. ಇದಕ್ಕೂ ಮುನ್ನ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಸಭೆ ನಡೆಸಿ ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರು ನಗರದಲ್ಲಿ ಕೈಗೊಂಡಿರುವ ಯೋಜನೆ/ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

(Visited 9 times, 1 visits today)

Related posts

Leave a Comment