ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮೇಲೆ ಚುನಾವಣಾ ನೀತಿಸಂಹಿತೆಯ ಕರಿನೆರಳು

ಬೆಂಗಳೂರು: 

       ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭದ ಮೇಲೆ ಚುನಾವಣಾ ನೀತಿ ಸಂಹಿತೆ ಕರಿನೆರಳು ಬಿದ್ದಿದ್ದು, ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯನ್ನು ಮುಂದೂಡಲಾಗಿದೆ.

      ನಾಳೆ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಬೇಕಿತ್ತು. ಆದರೆ, ಐದು ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರಶಸ್ತಿ ಘೋಷಣೆ ರದ್ದು ಪಡಿಸಲಾಗಿದೆ.

       2018 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರಕಟವಾಗಬೇಕಿತ್ತು. ಮಂಡ್ಯ, ರಾಮನಗರ, ಬಳ್ಳಾರಿ, ಬಾಗಲಕೋಟೆ, ಶಿವಮೊಗ್ಗ ಸೇರಿದಂತೆ ಒಟ್ಟು ಐದು ಕಡೆ ಉಪ ಚುನಾವಣೆಗಳು ನಡೆಯಲಿದೆ.ಚುನಾವಣೆ ಮುಗಿದ  ನಂತರ ನವೆಂಬರ್ 3ರ ಬಳಿಕ ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

(Visited 11 times, 1 visits today)

Related posts

Leave a Comment