ಬೆಂಗಳೂರು:
ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಉಪ ಚುನಾವಣೆಯಿಂದಾಗಿ ಮುಂದೂಡಲ್ಪಟ್ಟಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನವೆಂಬರ್ 15 ರಂದು ಆಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನವೆಂಬರ್ 1 ರಂದು ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಐದು ಕ್ಷೇತ್ರಗಳ ಉಪ ಚುನಾವಣಾ ನೀತಿ ಸಂಹಿತೆ ಬಿಸಿ ತಟ್ಟಿದ್ದರಿಂದ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿತ್ತು. ಇದೀಗ ನೀತಿ ಸಂಹಿತೆ ಅವಧಿ ಪೂರ್ಣಗೊಂಡಿದ್ದು ನವೆಂಬರ್ 15 ರಂದು ಸಮಾರಂಭ ನಡೆಸಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ.
ಇದು 63 ನೇ ಕನ್ನಡ ರಾಜ್ಯೋತ್ಸವ ಆದ ಕಾರಣ ಕಲೆ, ಸಾಹಿತ್ಯ, ರಂಗಭೂಮಿ, ಸಮಾಜಸೇವೆ, ಕ್ರೀಡೆ, ಸಿನಿಮಾ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ 63 ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
(Visited 6 times, 1 visits today)