ರಾಮನಗರ ಚುನಾವಣೆ : ಮತಯಂತ್ರದಲ್ಲಿ ಇರಲಿದೆ ಎಲ್.ಚಂದ್ರಶೇಖರ್ ಹೆಸರು

ರಾಮನಗರ :

      ರಾಮನಗರ ಕ್ಷೇತ್ರದ ಉಪ ಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಹಿಂದೆ ಸರಿದಿದ್ದಾರೆ. ಆದರೆ, ಎಲೆಕ್ಟ್ರಾನಿಕ್ ವೋಟಿಂಗ್ ಮಿಷಿನ್‌ನಲ್ಲಿ ಅವರ ಹೆಸರು ಇರುತ್ತದೆ.

      ಗುರುವಾರ ನಡೆದ ಮಹತ್ವದ ಬೆಳವಣಿಗೆಯಲ್ಲಿ ಎಲ್.ಚಂದ್ರಶೇಖರ್ ಕಣದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದರು. ನವೆಂಬರ್ 3ರ ಶನಿವಾರ ರಾಮನಗರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯಲಿದೆ.

      ಎಲ್.ಚಂದ್ರಶೇಖರ್ ಅವರು ಕಣದಿಂದ ಹಿಂದೆ ಸರಿದರೂ ಅವರ ಹೆಸರು ಮತಯಂತ್ರದಲ್ಲಿ ಇರಲಿದೆ. ಹಿಂದೆಯೂ ಈ ರೀತಿಯ ಹಲವಾರು ಪ್ರಕರಣಗಳು ನಡೆದಿವೆ ಎಂದು ಚುನಾವಣಾ ಆಯೋಗ ಹೇಳಿದೆ. ನಾಮಪತ್ರ ವಾಪಸ್ ಪಡೆಯಲು ನಿಗದಿ ಪಡಿಸಿದ ಕೊನೆಯ ದಿನಾಂಕದ ನಂತರ ಉಳಿಯುವ ಎಲ್ಲಾ ಅಭ್ಯರ್ಥಿಗಳ ಹೆಸರು ಮತಯಂತ್ರದಲ್ಲಿ ಇರಲಿದೆ.

       ಕೆಲವು ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿ ಇಲ್ಲದಿದ್ದರೂ ಮತವನ್ನು ಬಿಜೆಪಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ. ದೇಶದ ಹಿತಕ್ಕಾಗಿ ಬಿಜೆಪಿಗೆ ಮತ ಹಾಕಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ. 

 

 

 

(Visited 6 times, 1 visits today)

Related posts