ರೈತರಿಗೆ ಸಿಹಿಸುದ್ದಿ : ಭತ್ತಕ್ಕೆ 1600 ರೂ. ಬೆಂಬಲ ಬೆಲೆ

ಬೆಂಗಳೂರು :

      ಭತ್ತದ ಬೆಲೆ ಕುಸಿತದಿಂದ ರೈತರ ಸಂಕಷ್ಟಕ್ಕೆ ಧಾವಿಸಿರುವ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಭತ್ತಕ್ಕೆ 1600 ರೂ. ನಂತೆ ಖರೀದಿಸಲು ನಿರ್ಧರಿಸಿ, ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

      ಈ ಸಂಬಂಧ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಿ ತಕ್ಷಣವೇ ಮಧ್ಯಪ್ರವೇಶಿಸಿ ಪ್ರತಿಕ್ವಿಂಟಾಲ್ ಭತ್ತಕ್ಕೆ 1600 ರೂ.ನಂತೆ ಖರೀದಿಸುವಂತೆ ಆದೇಶ ನೀಡಿದರು.

      ರೈತರ ಸಂಕಷ್ಟದ ಹಿನ್ನೆಲೆಯಲ್ಲೆ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಅವರಿಗೆ, ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ನಾಡಗೌಡ ವೆಂಕಟರಾವ್ ಅವರು ಭತ್ತದ ಬೆಳೆಯ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು. ಇದಕ್ಕೆ ಸ್ಪಂದಿಸಿದ ಸಿಎಂ ಕುಮಾರಸ್ವಾಮಿ ಅವರು ಈ ಆದೇಶ ನೀಡಿದ್ದಾರೆ.

 

 

 

(Visited 8 times, 1 visits today)

Related posts

Leave a Comment