ಲಾರಿ ಹಿಂಬದಿಗೆ ಕಾರು ಡಿಕ್ಕಿ: ತಂದೆ-ಮಗ ದುರ್ಮರಣ

ಯಾದಗಿರಿ: 

      ಯಾದಗಿರಿ ಜಿಲ್ಲೆಯ ಸೈದಾಪುರ ಬಳಿ ನಡೆದ ಅಪಘಾತದಲ್ಲಿ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಶಹಾಬಾದ್ ನಿವಾಸಿಗಳಾದ ಸುಧಾಕರ್(47), ಪೃಥ್ವಿ(7) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.

      ಬೆಂಗಳೂರಿನಿಂದ ಶಹಾಬಾದ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

      ಸೈದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

(Visited 9 times, 1 visits today)

Related posts